ಉಪಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಗೆಲ್ಲುವುದು ಜೆಡಿಎಸ್ ಗೆ ದೊಡ್ಡ ಸವಾಲು: ಎಚ್‌ಡಿಕೆ

ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮೀರಿ ಗೆಲುವು ಸಾಧಿಸುವುದು ತಮ್ಮ ಪಕ್ಷಕ್ಕೆ  ದೊಡ್ಡ ಸವಾಲಾಗಿದೆ ಎಂದು ಜೆಡಿ(ಎಸ್) ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ. 
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮೀರಿ ಗೆಲುವು ಸಾಧಿಸುವುದು ತಮ್ಮ ಪಕ್ಷಕ್ಕೆ  ದೊಡ್ಡ ಸವಾಲಾಗಿದೆ ಎಂದು ಜೆಡಿ(ಎಸ್) ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ. 

ಆದಾಗ್ಯೂ, ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ, "ನಮ್ಮದು ಪ್ರಾದೇಶಿಕ ಪಕ್ಷ, ಆದರೂ ನಾವು ದೇಶಕ್ಕೆ ಪ್ರಧಾನಮಂತ್ರಿಯನ್ನು ನೀಡಿದ್ದೇವೆ ಮತ್ತು ನಮ್ಮ ಶಕ್ತಿ ಕರ್ನಾಟಕದಲ್ಲಿದೆ ಎಂದಿದ್ದಾರೆ.

ಈ ಉಪಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಮೆಟ್ಟಿ ನಿಲ್ಲುವುದು ನಮಗೆ ಸವಾಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಂತರ ಸರಣಿ ಟ್ವೀಟ್‌ಗಳಲ್ಲಿ, ಸಿರಾ ನಮ್ಮದೇ ಕ್ಷೇತ್ರ ಮತ್ತು ರಾಜರಾಜೇಶ್ವರಿ ನಗರದಲ್ಲಿಯೂ ನಮಗೆ ಪ್ರಾಬಲ್ಯವಿದೆ. ಆದ್ದರಿಂದ ಜೆಡಿಯು ಎರಡೂ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಅಚಲ ವಿಶ್ವಾಸವಿದೆ ಮತ್ತು "ಸೂಕ್ತ ಹಾಗೂ ನ್ಯಾಯಸಮ್ಮತ" ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಅವರ ಕುತಂತ್ರದ ರಾಜಕೀಯವನ್ನು ಸೋಲಿಸಲು ನಾವು ಕಾರ್ಯತಂತ್ರ ರೂಪಿಸಬೇಕಾಗಿದೆ ಮತ್ತು ಅದಕ್ಕಾಗಿ ನಾವು ಮಾನಸಿಕವಾಗಿ ಸಿದ್ಧರಾಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com