ಬೆಳಗಾವಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ಮುಳುಗುತ್ತಿರುವ ಹಡಗು ಕಾಂಗ್ರೆಸ್'ನದಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಡಗು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿಗಳ ಹಡಗು ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಅಭ್ಯರ್ಥಿ ಮಾಡುವ ಮೂಲಕ ಸತೀಶ್ ಜಾರಕಿಹೊಳಿಯವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಮಂಗಳ ಅಂಗಡಿಯವರಿಗೆ ಏನು ಮಾಡಿದರು? ಮೊದಲು ಯಾರ ಹೆಸರು ಕೇಳಿಬರುತ್ತಿತ್ತು, ನಂತರ ಏನಾಯ್ತು? ಎಲ್ಲಾ ಗೊತ್ತು. ರವಿ ಯಾವಾಗಲೂ ಸುಳ್ಳನ್ನೇ ಹೇಳುತ್ತಾನೆ. ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.
ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿ ಪಾಠ ಕಲಿಸಬೇಕೆಂದು ಇದೇ ವೇಳೆ ಹೇಳಿದರು.
Advertisement