ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ
ರಾಜಕೀಯ
ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ: ಏ.17ಕ್ಕೆ ಮತದಾನ
ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬೀಳಲಿದೆ.
ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬೀಳಲಿದೆ.
ಅಭ್ಯರ್ಥಿಗಳು ನಾಳೆ ಮನೆ ಮನೆ ಪ್ರಚಾರ ಕೈಗೊಳ್ಳಲಿದ್ದಾರೆ. ನಾಡಿದ್ದು ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಇಲ್ಲಿ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧಿಸುತ್ತಿದ್ದು ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿಯಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ