ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಉಪ-ಚುನಾವಣೆ: 2,566 ಮತಗಟ್ಟೆ ಸ್ಥಾಪನೆ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದ್ದು, ಉಪಚುನಾವಣೆಗೆ 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದ್ದು, ಉಪಚುನಾವಣೆಗೆ 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುಗಮ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಒಟ್ಟು ಮತಗಟ್ಟೆಗಳ ಪೈಕಿ 587 ಅತಿಸೂಕ್ಷ್ಮ ಮತ್ತು 118 ಸೂಕ್ಷ್ಮ ಎಂದು ಗುರುತಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ. 

ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅನುಕಂಪದ ಮತಗಳನ್ನು ಪಡೆಯಲು ಬಿಜೆಪಿ, ಸುರೇಶ್ ಅಂಗಡಿಯವರ ಪತ್ನಿ ಎಂ.ಎಸ್.ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದ್ದರೆ, ಹಾಲಿ ಶಾಸಕ ಮತ್ತು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಕ್ಷೇತ್ರದಲ್ಲಿ ಒಟ್ಟು 18,13,567 ಮತದಾರರಿದ್ದಾರೆ. 

ಅಧಿಕಾರಿಗಳು 1283 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಹದಿನಾರು ‘ಸಖಿ’ (ಮಹಿಳಾ ಮತದಾನ ಕೇಂದ್ರಗಳು) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 

ಸೂಕ್ಷ್ಮವಲ್ಲದ ಮತಗಟ್ಟೆಗಳಿಗೆ ಒಟ್ಟು 200 ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದ್ದು, 159 ವಿಡಿಯೋ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದೆ. ಒಟ್ಟು 132 ಎಎಸ್‌ಐ, 72 ಸಿಐಎಸ್‌ಎಫ್ ಸಿಬ್ಬಂದಿ, 977 ಹೆಡ್ ಕಾನ್‌ಸ್ಟೆಬಲ್‌ಗಳು, 1,406 ಪೊಲೀಸ್ ಕಾನ್‌ಸ್ಟೆಬಲ್‌ಗಳು ಮತ್ತು 905 ಗೃಹರಕ್ಷಕರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com