ಪಕ್ಷ ವಿರೋಧಿ ಚಟುವಟಿಕೆ ಆರೋಪ: ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಉಚ್ಚಾಟನೆ

ಇಂದು ನಡೆಯುತ್ತಿರುವ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಮಲ್ಲಿಕರ್ಜುನ್ ಖೂಬಾ
ಮಲ್ಲಿಕರ್ಜುನ್ ಖೂಬಾ
Updated on

ಬೀದರ್: ಇಂದು ನಡೆಯುತ್ತಿರುವ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಬಸವಕಲ್ಯಾಣದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಶರಣು ಸಲಗಾರ ಅವರ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೇಸರಿ ಪಾಳಯ ಆದೇಶಿಸಿದೆ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಖೂಬಾ ಅವರನ್ನು ಆರು ವರ್ಷ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com