ಕೊರೋನಾ ಹರಡುವುದನ್ನು ತಡೆಯಲಿಕ್ಕಾಗದೇ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ: ಸಿದ್ದರಾಮಯ್ಯ

ತುರ್ತುನಿಗಾ ಘಟಕದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರ ಕೊರೋನಾ ಸೋಂಕು ಹರಡುವುದನ್ನು ತಡೆಯಲಿಕ್ಕಾಗದೇ ಜನತೆಯ ಮುಂದೆ ಬೆತ್ತಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ತುರ್ತುನಿಗಾ ಘಟಕದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರ ಕೊರೋನಾ ಸೋಂಕು ಹರಡುವುದನ್ನು ತಡೆಯಲಿಕ್ಕಾಗದೇ ಜನತೆಯ ಮುಂದೆ ಬೆತ್ತಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸರ್ಕಾರವನ್ನು ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಸಿದ್ದರಾಮಯ್ಯ, ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ.

ವರ್ಷದ ಹಿಂದೆ ಮೊದಲ ಬಾರಿ‌ ಕೊರೋನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೋನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೋನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡಿರುವ ಸರ್ಕಾರ ಈಗ ಕೈಚೆಲ್ಲಿ ಕೂತಿದೆ. ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ ಎಂದಿದ್ದಾರೆ.

ಸಿಎಂ ಯಡಿಯೂರಪ್ಪ ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ. ಕೊರೋನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೋನಾ ಎದುರಿಸಲು ಬಿಜೆಪಿ ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com