ಚುನಾಯಿತಾ ಸರ್ಕಾರವೋ, ಇಲ್ಲ ಹುಚ್ಚರ ಸಂತೆಯೋ? ಪೊಲೀಸರಿಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೋನಾ ಓಡಿ ಹೋಗುತ್ತಾ?

ರಾಜ್ಯದಲ್ಲಿ ಚುನಾಯಿತ ಸರ್ಕಾರವಿದೇಯೋ ಇಲ್ಲ, ಹುಚ್ಚರ ಸಂತೆ ಇದೆಯೋ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಕ್ಷಣಕ್ಕೊಂದು ನಿಯಮ, ಕ್ಷಣಕ್ಕೊಂದು ಮಾರ್ಗಸೂಚಿ ಹೊರಡಿಸಿ ಅಮಾಯಕ ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ರಾಜ್ಯದಲ್ಲಿ ಚುನಾಯಿತ ಸರ್ಕಾರವಿದೇಯೋ ಇಲ್ಲ, ಹುಚ್ಚರ ಸಂತೆ ಇದೆಯೋ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಕ್ಷಣಕ್ಕೊಂದು ನಿಯಮ, ಕ್ಷಣಕ್ಕೊಂದು ಮಾರ್ಗಸೂಚಿ ಹೊರಡಿಸಿ ಅಮಾಯಕ ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಆಡಳಿತ ನಡೆಸಲು ಆಗದಿದ್ದರೆ ಕುರ್ಚಿ ಬಿಟ್ಟು ತೊಲಗಿ, ಜನರನ್ನೇಕೆ ಗೋಳಾಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರದ ನಿಷ್ಕ್ರಿಯತೆ, ದುರಾಳಿತದಿಂದಲೇ ಕೊರೋನಾ ತೀವ್ರವಾಗಿ ಉಲ್ಬಣಿಸಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೋನಾ ಓಡಿ ಹೋಗುತ್ತಾ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಲಾಕ್​​ಡೌನ್​ ಇರಲಿ, ಕರ್ಫ್ಯೂ ಇರಲಿ ಜನರಿಗೆ ಮೊದಲು ಮನವರಿಕೆ ಮಾಡಿಕೊಡಿ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ಧತೆಯೊಂದಿಗೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್​ ಹಚ್ಚುವ ತುಘಲಕ್​ ಆಡಳಿತವನ್ನು ಪುನರಾವರ್ತಿಸಬೇಡಿ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com