ಜಿಲ್ಲಾ ಉಸ್ತುವಾರಿ ಸಚಿವ ಬದುಕಿದ್ದಾರಾ? ಜಿಲ್ಲಾಡಳಿತ ಸತ್ತುಹೋಗಿದೆಯೇ?: ಸಾ.ರಾ. ಮಹೇಶ್

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಶಾಸಕ ಸಾ.ರಾ. ಮಹೇಶ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
ಸಾ.ರಾ ಮಹೇಶ್
ಸಾ.ರಾ ಮಹೇಶ್

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಶಾಸಕ ಸಾ.ರಾ. ಮಹೇಶ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಮೈಸೂರಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಇಲ್ಲದೆ ಜನ ಸಾಯುತ್ತಿದ್ದಾರೆ. ಮೈಸೂರು ಜಿಲ್ಲಾಡಳಿತ ಏನು ಮಾಡ್ತಿದೆ? ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ? ಎಂದು ಪ್ರಶ್ನಿಸಿದರು.

ನನ್ನ ಕ್ಷೇತ್ರದ ಮಹಿಳೆಯೊಬ್ಬರಿಗೆ ಆಕ್ಸಿಜನ್, ಬೆಡ್ ಸಿಗಲಿಲ್ಲ. ನಾನು ಆಕೆಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಸಿ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಿಸಿದ್ದೆ, ಆಕೆಯ ಆಕ್ಸಿಜನ್ ಮಟ್ಟ 60ಕ್ಕೆ ತಲುಪಿತ್ತು, ಆಕೆಗೆ ವೆಂಟಿಲೇಟರ್ ಅಗತ್ಯವಿತ್ತು, ನಾನು ಡಿಎಚ್ ಒಗೆ ಕರೆ ಮಾಡಿ ವೆಂಟಿಲೇಟರ್ ವ್ಯವಸ್ಥೆ ಮಾಡಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಆಕೆಗೆ 36 ವರ್ಷ ಮಾತ್ರ ಎಂದು ಸಾ.ರಾ. ಮಹೇಶ್ ಮಾಹಿತಿ ನೀಡಿದ್ದಾರೆ.

ಕೋವಿಡ್ ಕೇರ್‌ ಸೆಂಟರ್‌ಗಳಲ್ಲಿ ಕೇವಲ ಮಂಚ, ಬೆಡ್ ಹಾಕಿದರೆ ಸಾಲದು. ಅದಕ್ಕೆ ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಬೇಡವಾ? ಮೈಸೂರಿಗೆ ಎಷ್ಟು ಡಾಕ್ಟರ್ ಮತ್ತು ವೆಂಟಿಲೇಟರ್ ಕೊಟ್ಟಿದಿರಾ ಸಾರ್ವಜನಿಕರಿಗೆ ಮಾಹಿತಿ ಕೊಡಿ ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com