ಅಗತ್ಯವಿರುವಷ್ಟು ರೆಮಿಡಿಸಿವಿರ್, ಆಕ್ಸಿಜನ್ ಪೂರೈಸುವಂತೆ ಸಿಎಂಗೆ ಸಂಸದ ಡಿ.ಕೆ.ಸುರೇಶ್ ಪತ್ರ

ರಾಜ್ಯದಲ್ಲಿ ಅಗತ್ಯವಿರುವ ಪ್ರಮಾಣದ ರೆಮಿಡಿಸಿವಿರ್ ಚುಚ್ಚುಮದ್ದು ಹಾಗೂ  ಆಕ್ಸಿಜನ್ ಪೂರೈಕೆಯನ್ನು ಮಾಡುವಂತೆ ಆಗ್ರಹಿಸಿ ಸಂಸದ ಡಿ.ಕೆ.ಸುರೇಶ್ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಸಂಸದ ಡಿಕೆ ಸುರೇಶ್
ಸಂಸದ ಡಿಕೆ ಸುರೇಶ್

ಬೆಂಗಳೂರು: ರಾಜ್ಯದಲ್ಲಿ ಅಗತ್ಯವಿರುವ ಪ್ರಮಾಣದ ರೆಮಿಡಿಸ್ವಿವಿಯರ್‌ ಚುಚ್ಚುಮದ್ದನ್ನು ಸರಬರಾಜು ಹಾಗೂ ಅಗತ್ಯವಿರುವ ಆಕ್ಸಿಜನ್ ಪೂರೈಕೆಯನ್ನು ಮಾಡುವಂತೆ ಆಗ್ರಹಿಸಿ ಸಂಸದ ಡಿ.ಕೆ.ಸುರೇಶ್ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಸರಿಯಾಗಿ ಆಕ್ಸಿಜನ್ ಹಾಗೂ ರೆಮಿಡಿಸ್ವಿಯರ್ ನೀಡದಿರುವುಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಡಿ.ಕೆ.ಸುರೇಶ್, ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ಆಕ್ಸಿಜನ್, ರೆಮಿಸಿವಿಯ‌ ಔಷಧದ ತೀವ್ರವಾಗಿ ತಲೆದೋರಿದೆ.

ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಪೂರ್ಣ ಪ್ರಮಾಣದ ಆಕ್ಸಿಜನ್ ಪೂರೈಕೆ ಪ್ರತಿದಿನ 8 ಟನ್‌ಗಳಷ್ಟು ಅವಶಕ್ಯತೆಯಿದ್ದರೂ ಕೇವಲ 2 ರಿಂದ 3 ಟನ್ ಆಕ್ಸಿಜನ್ ಮಾತ್ರ ಸರಬರಾಜು ಮಾಡಲಾಗುತ್ತಿದೆ.

ಆಸ್ಪತ್ರೆಗಳಲ್ಲಿ ಹೆಚ್ಚಿನ ಸೋಂಕಿತರಿಗೆ ಚಿಕಿತ್ಸೆ ನೀಡುವ ಸೌಲಭ್ಯವಿದ್ದರೂ ಆಕ್ಸಿಜನ್ ಅಭಾವದಿಂದ ಪೂರ್ಣ ಪ್ರಮಾಣದಲ್ಲಿ ಸೋಂಕಿತರಿಗೆ ಚಿಕಿತ್ಸೆಯನ್ನು ನೀಡಲು ಸಾಧ್ಯವಾಗುತ್ತಿಲ್ಲ.

ಕೇವಲ 100 ರಿಂದ 140 ರೋಗಿಗಳಿಗೆ ಚಿಕಿತ್ಸೆಯನ್ನು ನೀಡುಲಾಗುತ್ತಿದ್ದು, ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಸಾಯುವ ಪರಿಸ್ಥಿತಿ ಉದ್ಭವವಾಗಿದೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com