ನೂತನ ಸಚಿವರ ಪಟ್ಟಿ ಬೆಳಗ್ಗೆ 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ 

ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ ಬಿಡುಗಡೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ ಬಿಡುಗಡೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ 11 ಗಂಟೆಯ ಹೊತ್ತಿಗೆ ನೀಡಲಾಗುತ್ತದೆ. ಬಳಿಕ ಕೆಲವೇ ಕ್ಷಣಗಳಲ್ಲಿ ರಾಜಭವನದಿಂದ ಅಧಿಕೃತ ಪಟ್ಟಿ ಹೊರಬೀಳಲಿದೆ. ಅಪರಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ರಾಜಭವನದ ಗಾಜಿನ ಮನೆಯಲ್ಲಿ ನೆರವೇರಲಿದೆ ಎಂದರು.

ವಿಧಾನಸೌಧದಲ್ಲಿ ಹೇಳಿಕೆ: ನಂತರ ವಿಧಾನಸೌಧದ ಮುಂದೆ ಸುದ್ದಿಗಾರರ ಮುಂದೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಒಂದೆರಡು ವಿಷಯಗಳನ್ನು 10 ಗಂಟೆಗೆ ಎಲ್ಲರಿಗೂ ತಿಳಿಸುತ್ತೇನೆ. 11 ಗಂಟೆಯ ವೇಳೆಗೆ ಶುಭ ಸುದ್ದಿಗಳು ಹೊರಬೀಳಲಿದೆ ಎಂದರು. 

ಸಂಭಾವ್ಯ ಸಚಿವರ ಪಟ್ಟಿ: ಶ್ರೀರಾಮುಲು, ಅಂಗಾರ, ಪೂರ್ಣಿಮಾ ಶ್ರೀನಿವಾಸ್, ಉಮೇಶ್ ಕತ್ತಿ, ಡಾ ಸುಧಾಕರ್, ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್, ಕೆ ಎಸ್ ಈಶ್ವರಪ್ಪಪ್ಪ, ವಿ.ಸೋಮಣ್ಣ, ಗೋವಿಂದ ಕಾರಜೋಳ, ಮಾಧುಸ್ವಾಮಿ, ಆನಂದ್ ಸಿಂಗ್, ಬಿ.ಸಿ ಪಾಟೀಲ್, ಅಶ್ವಥನಾರಾಯಣ್, ಬೈರತಿ ಬಸವರಾಜ್, ಮುರುಗೇಶ್ ನಿರಾಣಿ, ಗೋಪಾಲಯ್ಯ, ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಈಗಾಗಲೇ ಇವರೆಲ್ಲರಿಗೂ ವಿಧಾನಸೌಧಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳು ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ಸಿ ಪಿ ಯೋಗೇಶ್ವರ್, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಗುವುದು ಸಂಶಯವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com