ಸಿಎಂ ಬಸವರಾಜ ಸಂಪುಟ ಸೇರುವ ನೂತನ ಸಚಿವರು ಇವರು; ಮಧ್ಯಾಹ್ನ ಪ್ರಮಾಣ ವಚನ; ಬಿಎಸ್ ವೈ ಪುತ್ರ ವಿಜಯೇಂದ್ರಗೆ ಸ್ಥಾನ ಇಲ್ಲ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ ಇಂತಿದೆ:
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ ಇಂತಿದೆ:

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ - ಕೆ ಆರ್ ಪುರಂ, ಮುರುಗೇಶ್ ನಿರಾಣಿ - ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ - ಕೆ‌ಆರ್ ಪೇಟೆ, ಸುನೀಲ್ ಕುಮಾರ್  - ಕಾರ್ಕಳ, ಅರಗ ಜ್ಞಾನೇಂದ್ರ - ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ - ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ - ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ - ಎಂ ಎಲ್ ಸಿ, ಪ್ರಭು ಚೌವ್ಹಾಣ್ - ಔರಾದ್, ವಿ ಸೋಮಣ್ಣ - ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ - ಹೊಸಪೇಟೆ, ಸಿ ಸಿ‌ ಪಾಟೀಲ್ - ನರಗುಂದ, ಬಿಸಿ ನಾಗೇಶ್ - ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದಾರೆ.

ಇನ್ನು ಬೊಮ್ಮಾಯಿ ಸಂಪುಟದಿಂದ ಕೈಬಿಟ್ಟವರ ಹೆಸರುಗಳು: ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ ಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್. 

13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ - ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ, ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com