2023 ವಿಧಾನಸಭೆ ಚುನಾವಣೆ: ಒಂದು ವರ್ಷ ಮೊದಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧತೆಗೆ ಕಾಂಗ್ರೆಸ್ ಮುಂದು

2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆಯಾಗಿ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಒಂದು ವರ್ಷ ಮೊದಲೇ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲು ಉತ್ಸುಕವಾಗಿದೆ.
ಕ್ವಿಟ್ ಇಂಡಿಯಾ ಚಳವಳಿಯ 79ನೇ ವರ್ಷಾಚರಣೆ ಪ್ರಯುಕ್ತ ಮಹಾತ್ಮಾ ಗಾಂದಿ ಭಾವಚಿತ್ರಕ್ಕೆ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರಿಂದ ಗೌರವ ನಮನ
ಕ್ವಿಟ್ ಇಂಡಿಯಾ ಚಳವಳಿಯ 79ನೇ ವರ್ಷಾಚರಣೆ ಪ್ರಯುಕ್ತ ಮಹಾತ್ಮಾ ಗಾಂದಿ ಭಾವಚಿತ್ರಕ್ಕೆ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರಿಂದ ಗೌರವ ನಮನ

ಬೆಂಗಳೂರು/ಬೆಳಗಾವಿ: 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆಯಾಗಿ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಒಂದು ವರ್ಷ ಮೊದಲೇ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲು ಉತ್ಸುಕವಾಗಿದೆ.

ಅದರಲ್ಲೂ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಈ ಬಾರಿ ಪ್ರಬಲ ಅಭ್ಯರ್ಥಿಗಳನ್ನು ಹಾಕಿ ಮೊದಲೇ ಘೋಷಣೆ ಮಾಡಲು ಮುಂದಾಗಿದೆ. ಟಿಕೆಟ್ ಆಕಾಂಕ್ಷಿಗಳು ತಮಗೆ ಟಿಕೆಟ್ ಸಿಗಬಹುದೇನೋ ಎಂದು ಕಾತರದಿಂದ ಕಾಯುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಎದುರಿಸಲು ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮದೇ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಸಾಲು ಸಾಲು ಚುನಾವಣೆಗಳಿವೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್, ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಉಪ ಚುನಾವಣೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಗಳು ಕೂಡ ಇವೆ.

ಈಗಿನ ಪರಿಸ್ಥಿತಿಯಲ್ಲಿ ಚುನಾವಣೆ ಗೆಲ್ಲುವುದು ಅಷ್ಟು ಸುಲಭವಲ್ಲ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಾಧ್ಯವಾದಷ್ಟು ಸೀಟುಗಳನ್ನು ಗೆಲ್ಲಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಮುಂದಿನ ವರ್ಷವೇ 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ, ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸ ಎಂದು ಹೆಸರು ಹೇಳಲಿಚ್ಛಿಸದ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಹೇಳುತ್ತಾರೆ.

ಚುನಾವಣೆಗೆ ಬಹಳ ಸಮಯಗಳ ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದರಿಂದ ಕ್ಷೇತ್ರದ ಮತದಾರರ ಮನಸ್ಥಿತಿಯನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಕೂಡ ಪಕ್ಷಕ್ಕೆ ಮುಖ್ಯವಾಗುತ್ತದೆ. ಪ್ರಸ್ತುತ ಪಂಚಾಯತ್ ಸದಸ್ಯರಿಂದ ಆಯ್ಕೆಯಾಗಿರುವ 25 ವಿಧಾನ ಪರಿಷತ್ ಸದಸ್ಯರಲ್ಲಿ 14 ಮಂದಿ ಕಾಂಗ್ರೆಸ್ ನವರು. ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿ ಮಾತ್ರವಲ್ಲದೆ ಮೇಲ್ಮನೆಯನ್ನು ಹೆಚ್ಚಿನ ಸ್ಥಾನ ಗಳಿಸುವುದು ಕೂಡ ನಮಗೆ ಮುಖ್ಯ ಎನ್ನುತ್ತಾರೆ.

ಇನ್ನು ಸತೀಶ್ ಜಾರಕಿಹೊಳಿಯವರು ಪ್ರತಿಕ್ರಿಯಿಸಿ, ಪಕ್ಷದ ಹಲವು ವೇದಿಕೆಗಳಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಬಗ್ಗೆ ಚರ್ಚಿಸಲಾಗಿದೆ. ನಾಯಕರ ನಡುವಿನ ಭಿನ್ನಾಭಿಪ್ರಾಯ ಮತ್ತು ಪಕ್ಷದೊಳಗಿನ ಆಂತರಿಕ ಕಿತ್ತಾಟಗಳನ್ನು ಸಹ ಮೊದಲೇ ಅಭ್ಯರ್ಥಿಗಳನ್ನು ಘೋಷಿಸುವುದರಿಂದ ಕಡಿಮೆ ಮಾಡಬಹುದು ಎಂದಿದ್ದಾರೆ. ಸದ್ಯದಲ್ಲಿಯೇ ಇದಕ್ಕೆ ಅಂತಿಮ ರೂಪುರೇಷೆ ಕೊಡುವ ಸಾಧ್ಯತೆಯಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com