
ಮಂಗಳೂರು: ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು’ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂದರೆ ಎಲ್ಲವೂ ತಾನೇ ಎಂದು ರವಿ ಭಾವಿಸಿದಂತಿದೆ. ಮೇಕೆದಾಟು ವಿಷಯದಲ್ಲಿ ಕರ್ನಾಟಕದ ಪರ ನಿಲ್ಲಬೇಕಿದ್ದ ರವಿ, ತಮಿಳುನಾಡು ಪರ ನಿಂತಿರುವುದು ಅಕ್ಷಮ್ಯ. ಇತಿಹಾಸ ಜ್ಞಾನವಿಲ್ಲದ, ಸಾಮಾಜಿಕ ಹಿನ್ನಲೆಯೂ ಇಲ್ಲದ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದವರ ಬಗ್ಗೆ ಅಸಂಬದ್ಧವಾಗಿ, ಹಗುರವಾಗಿ ಮಾತನಾಡುವ ಸಿಟಿ ರವಿ ಅಂಥವರಿಗೆ ಬಿಜೆಪಿ ಮಣೆ ಹಾಕುತ್ತಿರುವುದು ವಿಪರ್ಯಾಸ’ ಎಂದರು.
ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ ಮಹಾತ್ಮರ ಹೆಸರನ್ನು ಬದಲಾಯಿಸುವ ಮತ್ತು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಬಿಜೆಪಿಗರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಸ್ಮಾರಕಗಳ ಹೆಸರನ್ನೂ ಕೂಡ ಬದಲಾಯಿಸಿದರೂ ಅಚ್ಚರಿಯಿಲ್ಲ ಎಂದು ಆರೋಪಿಸಿದ್ದಾರೆ.
Advertisement