ರಾಜಕೀಯ

ಅಫ್ಘಾನ್ ಬೆಳವಣಿಗೆಗಳಿಗೆ ಭಾರತ ಮಾನವೀಯ ರೀತಿಯಲ್ಲಿ ಪ್ರತಿಕ್ರಯಿಸಬೇಕು: ಎಚ್.ಡಿ. ದೇವೇಗೌಡ

ಅಫ್ಘಾನ್ ಬೆಳವಣಿಗೆಗಳಿಗೆ ಭಾರತ ಮಾನವೀಯ ರೀತಿಯಲ್ಲಿ ಪ್ರತಿಕ್ರಯಿಸಬೇಕು: ಎಚ್.ಡಿ. ದೇವೇಗೌಡ
ದೇವೇಗೌಡ
Published On :

ಬೆಂಗಳೂರು: ನಮ್ಮ ನೆರೆಹೊರೆಯಲ್ಲಿ ಸ್ನೇಹ ಮತ್ತು ಶಾಂತಿ ಸ್ಥಾಪಿಸುವ ಸ್ವತಂತ್ರ ನೀತಿಯನ್ನು ಅಭಿವೃದ್ಧಿಪಡಿಸುವುದರ ಜೊತೆಗೆ, ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳಿಗೆ ಭಾರತ "ಮಾನವೀಯ ರೀತಿಯಲ್ಲಿ" ಪ್ರತಿಕ್ರಿಯಿಸಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.

"ಅಫ್ಘಾನಿಸ್ತಾನದ ವರದಿಗಳು ಹೇಗೆ ಭಯ ಮತ್ತು ಅನಿಶ್ಚಿತತೆ ಆ ದೇಶವನ್ನು ಆವರಿಸಿದೆ ಎಂಬುದನ್ನು ತೋರಿಸುತ್ತದೆ. ಇದು ಭಾರತ ಮತ್ತು ಇಡೀ ಪ್ರದೇಶಕ್ಕೆ ಕಷ್ಟದ ಕ್ಷಣವಾಗಿದೆ. ನಾವು ನಮ್ಮ ನೆರೆಹೊರೆಯಲ್ಲಿ ಸ್ನೇಹ ಮತ್ತು ಶಾಂತಿಯನ್ನು ಸ್ಥಾಪಿಸುವ ಸ್ವತಂತ್ರ ನೀತಿಯನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಮಾನವೀಯ ರೀತಿಯಲ್ಲಿ ಪ್ರತಿಕ್ರಿಯಿಸಬೇಕು" ಎಂದು ಮಾಜಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಭದ್ರತಾ ಪರಿಸ್ಥಿತಿಯು ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕಾಬೂಲ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿರುವ ಭಾರತೀಯ ರಾಯಭಾರಿ ಮತ್ತು ಸಿಬ್ಬಂದಿಯನ್ನು ಭಾರತ ಮಂಗಳವಾರ ತವರಿಗೆ ಕರೆತಂದಿದೆ.

ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಭಾನುವಾರ ಅಫ್ಘಾನಿಸ್ತಾನದಿಂದ ಪಲಾಯನ ಮಾಡಿದ ಕೆಲವು ಗಂಟೆಗಳ ನಂತರ, ತಾಲಿಬಾನ್ ಕಾಬೂಲ್ ಮೇಲೆ ಹಿಡಿತ ಸಾಧಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.