ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯೋ ಕಾರ್ಯಕ್ರಮ: 50 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಮುಗಿಯಲ್ಲ!

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಹೆಸರಲ್ಲಿ ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 

ಕೋಲಾರ: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಹೆಸರಲ್ಲಿ ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ, ಇತ್ತೀಚೆಗೆ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು ರಮೇಶ್ ಕುಮಾರ್‌ರನ್ನು ಹೊಗಳಿದ ವಿಚಾರವಾಗಿ ವಾಗ್ದಾಳಿ ನಡೆಸಿದ್ದಾರೆ. ರಮೇಶ್ ಕುಮಾರ್ ಎತ್ತಿನ ಹೊಳೆ ಯೋಜನೆಯ ಮಹಾನ್ ನಾಯಕ, 3 ವರ್ಷದಲ್ಲಿ ಎತ್ತಿನ ಹೊಳೆ ನೀರು ತರುವುದಾಗಿ ಹೇಳಿದ್ದರು, ಆದರೆ 10 ವರ್ಷವಾದರೂ ಬಂದಿಲ್ಲ ಎಂದು  ಕಿಡಿಕಾರಿದ್ದಾರೆ.

ಎತ್ತಿನಹೊಳೆ ನೀರು ಸಂಗ್ರಹ ಮಾಡಲು ಮೊದಲು ಐದು ಟಿ ಎಂ ಸಿ ಸಾಮರ್ಥ್ಯದ ಜಲಾಶಯ ನಿರ್ಮಿಸುವುದಾಗಿ ಹೇಳಿ ಈಗ ಎರಡು ಟಿಎಂಸಿ ಸಾಮರ್ಥ್ಯಕ್ಕೆ ಬಂದಿದ್ದಾರೆ. 50 ಸಾವಿರ ಕೋಟಿ ಹಣ ಖರ್ಚು ಮಾಡಿದರೂ ಎತ್ತಿನಹೊಳೆ ಯೋಜನೆ ಮುಗಿಯಲ್ಲ ಎಂದು ಎಚ್‌ಡಿಕೆ ಭವಿಷ್ಯ ನುಡಿದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com