ಜಾತಿ ಗಣತಿ ವಿಚಾರ ಕೋರ್ಟ್‌ನಲ್ಲಿದ್ದು, ಈ ಬಗ್ಗೆ ಹೆಚ್ಚು ಮಾತನಾಡಲ್ಲ: ಸಿಎಂ ಬೊಮ್ಮಾಯಿ

ಜಾತಿ ಗಣತಿ ವಿಚಾರ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜಾತಿ ಗಣತಿ ವಿಚಾರ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 

ಅಶೋಕನಗರದ ತಮ್ಮ ನಿವಾಸದಲ್ಲಿ ಮಾತನಾಡಿರುವ ಅವರು, ಜಾತಿ ಗಣತಿ ವರದಿಯನ್ನು ಹಿಂದುಳಿದ ಆಯೋಗ ಕೂಡ ಪರಿಶೀಲನೆ ನಡೆಸುತ್ತಿದೆ. ಈ ವಿಚಾರ ನ್ಯಾಯಾಲಯದ ಅಂಗಳದಲ್ಲಿದ್ದು, ಇತ್ಯರ್ಥಕ್ಕೆ ಕಾಲಾವಕಾಶವಿದೆ. ಆ ಕುರಿತು ವಿರೋಧ ಪಕ್ಷದವರಷ್ಟೇ ಅಲ್ಲ. ಯಾರು ಬೇಕಾದರೂ ಪ್ರಧಾನಿ ಅವರನ್ನು ಭೇಟಿ ಆಗಬಹುದು ಎಂದು ಹೇಳಿದ್ದಾರೆ. 

ಬಳಿಕ ಗುಂಡು ಹೊಡೆದರೂ ಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡುತ್ತೇವೆಂಬ ಬಸನಗೌಡ ಪಾಟೀಲ ಯತ್ನಾಳ್ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಬಗ್ಗೆ ನಾನೇನನ್ನೂ ಹೇಳುವುದಿಲ್ಲ. ಅವರನ್ನೇ ಕೇಳಿ ಎಂದು ತಿಳಿಸಿದ್ದಾರೆ. 

'ಸೆ. 3 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ರಾಜಕೀಯದ ಕುರಿತು ಏನೂ ಮಾತನಾಡುವುದಿಲ್ಲ' ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com