ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ: ಮೂರು ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕೆ!

ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಮತದಾನ ನಡೆಯಲಿದ್ದು,  ಮೇಯರ್ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರೂ ಪಕ್ಷಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
ಮೈಸೂರು ಮಹಾನಗರ ಪಾಲಿಕೆ
ಮೈಸೂರು ಮಹಾನಗರ ಪಾಲಿಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಮತದಾನ ನಡೆಯಲಿದ್ದು,  ಮೇಯರ್ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರೂ ಪಕ್ಷಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಇದೇ ಮೊದಲ ಬಾರಿಗೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸುತ್ತಿದೆ.

ಜೆಡಿಎಸ್‌ ನಿಂದ ಅಶ್ವಿನಿ ಅನಂತ್, ಬಿಜೆಪಿಯಿಂದ ಸುನಂದಾ ಫಾಲನೇತ್ರ, ಕಾಂಗ್ರೆಸ್ ನಿಂದ ಶಾಂತಕುಮಾರಿ ಕಣಕ್ಕಿಳಿದಿದ್ದಾರೆ. ಈ ಬಾರಿ ಕೂಡ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬಹುದು ಎಂದು ನಿರೀಕ್ಷೆ ಮಾಡಲಾಗಿತ್ತಾದರೂ ಅಂತಿಮ ಕ್ಷಣದಲ್ಲಿ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಗೆದ್ದ ಅಭ್ಯರ್ಥಿಗೆ ಅಧಿಕಾರಾವಧಿ ಇರುವುದು ಇನ್ನು ಆರು ತಿಂಗಳು ಮಾತ್ರ.

ಇನ್ನು ಕೆಲವೇ ಹೊತ್ತಿನಲ್ಲಿ ಪಾಲಿಕೆ ಆವರಣದಲ್ಲಿ ಮತದಾನ ನಡೆಯಲಿದೆ. ಮೂರೂ ಪಕ್ಷಗಳು ರಣತಂತ್ರ ಹೆಣೆದಿವೆ. ಸದ್ಯ ಪಾಲಿಕೆಯಲ್ಲಿ ಬಿಜೆಪಿ ಅತಿಹೆಚ್ಚು ಸದಸ್ಯ ಬಲವನ್ನು ಹೊಂದಿದ್ದು ಬಿಜೆಪಿಯ 22, ಒಬ್ಬ ಸಂಸದ, ಇಬ್ಬರು ಶಾಸಕರು ಸೇರಿ 25, ಕಾಂಗ್ರೆಸ್ ನಲ್ಲಿ 20 ಸದಸ್ಯ ಬಲವಿದ್ದರೆ, ಜೆಡಿಎಸ್ ನಲ್ಲಿ 21 ಸದಸ್ಯರ ಬಲವಿದೆ, ಒಟ್ಟು ಸದಸ್ಯರ ಸಂಖ್ಯೆ 65 ಇದ್ದು ಒಬ್ಬರ ಸದಸ್ಯತ್ವ ರದ್ದಾಗಿರುವುದರಿಂದ 64 ಸದಸ್ಯರಿದ್ದಾರೆ. ಈ ಚುನಾವಣೆಯಲ್ಲಿ ಮ್ಯಾಜಿಕ್ ನಂಬರ್ ನಲ್ಲಿ ಅವಶ್ಯಕತೆ ಬರುವುದಿಲ್ಲ. ಬಹುಮತ ಪಡೆಯುವ ಪಕ್ಷದ ಅಭ್ಯರ್ಥಿಗೆ ಪಾಲಿಕೆಯ ಮೇಯರ್ ಪಟ್ಟ ದಕ್ಕಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com