ತವರು ಜಿಲ್ಲೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ'ಗೆ ಅದ್ಧೂರಿ ಸ್ವಾಗತ

ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ನೀಡಿದ ಬಳಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶುಕ್ರವಾರ ಭರ್ಜರಿ ಸ್ವಾಗತ ಕೋರಿದರು.
ತಮ್ಮ ನೂತನ ಕಾರಿನಲ್ಲಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ
ತಮ್ಮ ನೂತನ ಕಾರಿನಲ್ಲಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ನೀಡಿದ ಬಳಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶುಕ್ರವಾರ ಭರ್ಜರಿ ಸ್ವಾಗತ ಕೋರಿದರು.

ಶಿವಮೊಗ್ಗದ ವಿನೋಬನಗರದಲ್ಲಿರುವ ನಿವಾಸಕ್ಕೆ ಶುಕ್ರವಾರ ಸಂಜೆ ಯಡಿಯೂರಪ್ಪ ಭೇಟಿ ನೀಡಿದ್ದು, ಈ ವೇಳೆ ಹೂ ಗುಚ್ಛ ನೀಡಿ, ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದರು. 

ಈ ವೇಳೆ ಮಾತನಾಡಿದ, ನನ್ನ ಅಧಿಕಾರಾವಧಿಯಲ್ಲಿ ಶಿವಮೊಗ್ಗಕ್ಕೆ ನನ್ನ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಶಿವಮೊಗ್ಗಕ್ಕೆ ಮಾತ್ರವಲ್ಲದೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಭಿವೃದ್ಧಿಯ ಕೊಡುಗೆ ನೀಡಿದ್ದೇನೆ. ಜಾತಿ, ಧರ್ಮ, ಪಂಥ ಎಂದು ನೋಡದೆ ಪ್ರತಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಕೆಲಸ ಮಾಡಿಕೊಟ್ಟಿದ್ದೇನೆ. ಎಲ್ಲಾ ಶಾಸಕರಿಗೂ ಸ್ಪಂದಿಸಿದ್ದೇನೆ. ನನಗೆ ಅತ್ಮತೃಪ್ತಿಯಿದೆ. ರಾಜ್ಯದ ಎಲ್ಲಾ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಶಿವಮೊಗ್ಗದ ವಿಮಾನ ನಿಲ್ದಾಣ ಶೀಘ್ರವಾಗಿ ಪೂರ್ಣಗೊಳ್ಳಲಿದ್ದು, ವಿಮಾನ ಹಾರಾಟ ನಡೆಸಲಿದೆ. ಆ ಬಳಿಕ ಇಲ್ಲಿ ಕೈಗಾರಿಕೆಗಳು ಹೆಚ್ಚಿನ ರೀತಿಯಲ್ಲಿ ಆರಂಭಗೊಳ್ಳಲಿದೆ, ಉದ್ಯೋಗಾವಕಾಶಗಳು ಹೆಚ್ಚಲಿದೆ ಎಂದು ಹೇಳಿದರು. 

2023ರ ವಿಧಾನಸಭೆ ಚುನಾವಣೆ ಮೇಲೆ ಪಕ್ಷದ ಹೆಚ್ಚಿನ ಗಮನಹರಿಸಿದೆ. ಮುಂದಿನ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಪಕ್ಷ ಹೊಂದಿದೆ. ಇದಕ್ಕಾಗಿ ಚೌತಿಯ ಬಳಿಕ ರಾಜ್ಯದ ಎಲ್ಲಾ 30 ಜಿಲ್ಲೆಗಳಿಗೆ ಪ್ರವಾಸ ಮಾಡುತ್ತೇನೆ. ಪಕ್ಷವನ್ನು ಗಟ್ಟಿಯಾಗಿ ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕನಿಷ್ಠ 140 ಸ್ಥಾನಗಳನ್ನು ಗೆದ್ದು ಮತ್ತೆ ಬಿಜೆಪಿಯನ್ನು ಅಧಇಕಾರಕ್ಕೆ ತರುವುದು ನನ್ನ ಗುರಿಯಾಗಿದೆ. ಈ ಕಾರ್ಯವನ್ನು ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು, ಮುಖಂಡರ ನೆರವಿನೊಂದಿಗೆ ಮಾಡುತ್ತೇನೆ. ಎರಡನೇ ಹಂತದಲ್ಲಿ ಎಲ್ಲಾ ಶಾಸಕರ ಕ್ಷೇತ್ರಕ್ಕೂ ಹೋಗಿ ಸಂಘಟನೆಯ ಕಾರ್ಯ ಮಾಡುತ್ತೇನೆಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com