ಸಿಎಂ ಆಗಿ ಬೊಮ್ಮಾಯಿ ಒಂದು ತಿಂಗಳು ಅಧಿಕಾರ ಪೂರ್ಣ: ಉತ್ತಮ ಆಡಳಿತಗಾರ ಎಂಬ ಪ್ರಶಂಸೆ; ವೈಫಲ್ಯ, ಸಾಧನೆಗಳೇನು?

ಕೋವಿಡ್ ಮೂರನೇ ಅಲೆಗೆ ಕರ್ನಾಟಕ ಸಿದ್ಧವಾಗುತ್ತಿದ್ದ ವೇಳೆಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆಡಳಿತ ವಹಿಸಿಕೊಂಡ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಕಾರ್ಯವೈಖರಿಗಾಗಿ  ಬೆಂಬಲಿಗರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಕೋವಿಡ್ ಮೂರನೇ ಅಲೆಗೆ ಕರ್ನಾಟಕ ಸಿದ್ಧವಾಗುತ್ತಿದ್ದ ವೇಳೆಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆಡಳಿತ ವಹಿಸಿಕೊಂಡ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಕಾರ್ಯವೈಖರಿಗಾಗಿ  ಬೆಂಬಲಿಗರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜುಲೈ ತಿಂಗಳಲ್ಲಿ ಯಡಿಯೂರಪ್ಪ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿ ಹಲವು ಸಮಾಜ ಮುಖಿ ನಿರ್ಣಯ ಕೈಗೊಂಡರು, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯ ಧನ ಸೇರಿದಂತೆ ಹಲವು ಕಾರ್ಯಕ್ರಮ ಜಾರಿಗೆ ತಂದರು.

ಬಸವರಾಜ ಬೊಮ್ಮಾಯಿ 1 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಹಲವು ಶಾಸಕರು ಸಿಎಂ ಕಚೇರಿಗೆ ತೆರಳಿ ಶುಭ ಹಾರೈಸಿದ್ದಾರೆ. ಆದರೆ ಇನ್ನೂ ಉಳಿದಿರುವ 19 ತಿಂಗಳುಗಳಲ್ಲಿ ಸಿಎಂ ಬೊಮ್ಮಾಯಿ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ,

ಸೆಪ್ಟಂಬರ್ 13 ರಿಂದ 24ರವರೆಗೆ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಮೇಲ್ಮನೆ ಮತ್ತು ಕೆಳಮನೆಯಲ್ಲಿ ವಿರೋಧ ಪಕ್ಷಗಳಿಗೆ ಉತ್ತರ ನೀಡಬೇಕಿದೆ. ಕಾನೂನು ಮತ್ತು ಸಂಸದೀಯ ಖಾತೆಯನ್ನು ನಿರ್ವಹಿಸಿದ್ದ ಬೊಮ್ಮಾಯಿ ಅವರ ರಾಜಕೀಯ ಚಾಣಾಕ್ಷತೆಗೆ ಸಿಎಂ ಆಗಿ ಕಾರ್ಯ ನಿರ್ವಹಿಸುವುದು ಸವಾಲಾಗಿದೆ.

ಜೆಡಿಎಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿರುವ ಬಿಜೆಪಿ ಮೇಲ್ಮನೆಯಲ್ಲಿ ಜೆಡಿಎಸ್ ಶಾಸಕ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿಯನ್ನಾಗಿ ನೇಮಿಸಿದೆ, ಅದೇ ರೀತಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಜೊತೆ ತಂತ್ರ ರೂಪಿಸಲಿದೆ.

ಮೇಲ್ನೋಟಕ್ಕೆ ಕಾಣುವಂತೆ ಭಿನ್ನಾಭಿಪ್ರಾಯಗಳು ಕಡಿಮೆಯಾಗಿರಬಹುದು, ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅವರು ತಮ್ಮ ಅತೃಪ್ತಿಯನ್ನು ವ್ಯಕ್ತ ಪಡಿಸಿದ್ದಾರೆ. ಆದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಣ್ಣಗಾಗಿದ್ದಾರೆ. ಆದರೆ ಭಿನ್ನಾಭಿಪ್ರಾಯದ ಗೊಣಗಾಟ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಪಕ್ಷದ ಒಳಗಿನವರು ಒಪ್ಪಿಕೊಳ್ಳುತ್ತಾರೆ. 

ಬೊಮ್ಮಾಯಿ ಇನ್ನೂ ನಾಲ್ಕು ಸಚಿವರಿಗೆ ಅವಕಾಶ ಕಲ್ಪಿಸಬೇಕಿದ್ದು, ಆದರೆ 20 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಅವಕಾಶ ಕಲ್ಪಿಸಲು ಬಯಸಿದ್ದಾರೆ ಆದರೆಬೊಮ್ಮಾಯಿ ಬಿಜೆಪಿ ಹೈಕಮಾಂಡ್  ನಿರ್ದೇಶನದಂತೆ ನಡೆಯಬೇಕಾಗಿದೆ. ಇದರ ಜೊತೆಗೆ ಎಲ್ಲರನ್ನು ಸಂತೋಷಪಡಿಸಬೇಕಾಗಿದೆ.

ಭಾವನಾತ್ಮಕ ಸಮಸ್ಯೆಗಳಾಗಿ ಉಳಿದಿರುವ ಕಳಸಾ-ಬಂಡೂರಿ, ಎತ್ತಿನಹೊಳೆ, ಮೇಕೆದಾಟು ಮತ್ತು ಕೃಷ್ಣ ಮೇಲ್ದಂಡೆ ಮುಂತಾದ ಅನೇಕ ಜಲ ಸಂಪನ್ಮೂಲ ಸಂಬಂಧಿತ ಸಮಸ್ಯೆಗಳು ಕೂಡ ಇವೆ. 2008-2013ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೊಮ್ಮಾಯಿ ಐದು ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದರು. ಹೀಗಾಗಿ ಜಲ ವಿವಾದಗಳನ್ನು ಬಗೆಹರಿಸುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯು ಆಡಳಿತದ ದುಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ- ಡಿಕೆ ಶಿವಕುಮಾರ್

ಬೊಮ್ಮಾಯಿ ಅವರು ರೈತರ ಮತ್ತು ಇತರರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುವ ಬಗ್ಗೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಸರ್ಕಾರದ ನಿರ್ಧಾರಗಳು ಸರಿಯಾದ ದಿಕ್ಕಿನಲ್ಲಿವೆ - ಅರುಣ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ

ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ಜನರ ಕುಂದುಕೊರತೆಗಳನ್ನು ಪರಿಹರಿಸಲು ಲಭ್ಯವಿರುವುದನ್ನು ಮುಖ್ಯಮಂತ್ರಿ ಖಚಿತಪಡಿಸಿಕೊಳ್ಳಬೇಕು - ಸಿದ್ದರಾಮಯ್ಯ, ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ

ರೈತರ ಮಕ್ಕಳಿಗೆ 1,000 ಕೋಟಿ ವಿಶೇಷ ಸ್ಟೈಫಂಡ್ ಘೋಷಣೆ, 
ವಿಧವೆಯರಿಗೆ ಪಿಂಚಣಿ ಸೇರಿದಂತೆ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಪರಿಷ್ಕರಣೆ,

75 ವರ್ಷಗಳ ಸ್ವಾತಂತ್ರ್ಯದ ಅಂಗವಾಗಿ ಅಮೃತ್ ಯೋಜನೆಗಳು 

ವೈಫಲ್ಯಗಳು
ಮೈಸೂರು ಸಾಮೂಹಿಕ ಅತ್ಯಾಚಾರ, ಇದೇ ರೀತಿಯ ಅಪರಾಧಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪ್ರಶ್ನೆಗಳನ್ನು ಹುಟ್ಟುಹಾಕಿವೆ

ಸಚಿವ ಆನಂದ್ ಸಿಂಗ್ ಅವರು ತಮ್ಮ ಖಾತೆ ಬಗ್ಗೆ ಅಸಮಾಧಾನ

ಸಂಪೂರ್ಣ ನಿಯಂತ್ರಣದಲ್ಲಿರುವ ಸಿಎಂ ಎಂದು ಪ್ರತಿಪಕ್ಷಗಳ ಆರೋಪ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com