ಅಹಿಂದ ಮತದಾರರನ್ನು ಸೆಳೆಯಲು, ಸಿದ್ದರಾಮಯ್ಯ ಪ್ರಾಬಲ್ಯ ಕುಗ್ಗಿಸಲು ಬಿಜೆಪಿ ಪ್ಲಾನ್!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಪಟ್ಟಿಯನ್ನು ಯುವ ನಾಯಕರು ಹಿಂದುಳಿದ ಸಮುದಾಯಗಳಿಗೆ ತಲುಪಸಲು ಮುಂದಾಗಿದ್ದಾರೆ.
ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿದ ಈಶ್ವರಪ್ಪ
ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿದ ಈಶ್ವರಪ್ಪ
Updated on

ಮೈಸೂರು: ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಮತದಾರರ ಮೇಲೆ ಸಿದ್ದರಾಮಯ್ಯನವರ ಪ್ರಭಾವವನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ, ಬಿಜೆಪಿ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ಪಕ್ಷದ ಮಂಡಲಗಳಲ್ಲಿ ಕಾರ್ಯತಂತ್ರ ರೂಪಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಪಟ್ಟಿಯನ್ನು ಯುವ ನಾಯಕರು ಹಿಂದುಳಿದ ಸಮುದಾಯಗಳಿಗೆ ತಲುಪಸಲು ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ 330 ಮಂಡಲಗಳನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ಬಿಜೆಪಿಯ ಹಿಂದುಳಿದ ವರ್ಗಗಳ ಘಟಕವೂ ಪ್ರತಿ ಮಂಡಲದಲ್ಲಿ ಪ್ರಬಲ ಹಿಂದುಳಿದ ಜಾತಿಗಳಿಗೆ ಸೇರಿದ 10 ಜನರನ್ನು ಆಯ್ಕೆ ಮಾಡಿದ್ದು,ಗೆ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಶಿಕ್ಷಣ ನೀಡಲಾಗುತ್ತಿದೆ.

2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ಚುನಾವಣೆಗಳು ಇರುವುದರಿಂದ ಕರ್ನಾಟಕದಲ್ಲಿ ಮುಂದಿನ ಎರಡು ವರ್ಷಗಳು ಪಕ್ಷಕ್ಕೆ ನಿರ್ಣಾಯಕವಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2023 ರ ವಿಧಾನಸಭೆ ಚುನಾವಣೆ ನಂತರ 2024 ರ ಸಾರ್ವತ್ರಿಕ ಚುನಾವಣೆಗಳನ್ನು ಗೆಲ್ಲಲು ಪಕ್ಷವನ್ನು ಸಂಘಟಿಸುವತ್ತ ಗಮನಹರಿಸಬೇಕು ಎಂದು ರಾಜ್ಯ ನಾಯಕತ್ವವು ಭಾವಿಸುತ್ತದೆ.

ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆ, ಮೈಸೂರು ಮತ್ತು ಉಡುಪಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಿರುವ ಬಿಜೆಪಿ ಬೆಂಗಳೂರಿನಲ್ಲಿ ಚಿಂತನ ಮಂಥನ ನಡೆಸಲಿದೆ.

ಹಿಂದುಳಿದ ವರ್ಗ ಮತ್ತು ದಲಿತರನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಒಪ್ಪಲಿಲ್ಲ ಎಂಬ ಅಂಶವನ್ನು ಬಿಜೆಪಿ ಹೈಲೈಟ್ ಮಾಡುತ್ತಿದೆ.  ಹಿಂದುಳಿದ ವರ್ಗಗಳ ಆಯೋಗವು ತನ್ನ ವರದಿಯನ್ನು ಸಲ್ಲಿಸಿದ ನಂತರ ಸರ್ಕಾರವು ಶಿಫಾರಸುಗಳನ್ನು ಸ್ವೀಕರಿಸುತ್ತದೆ ಎಂದು ಆರ್‌ಡಿಪಿಆರ್ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ದಿನ ವಿಧಾನಸಭೆ ಚುನಾವಣೆ ವೇಳೆ ಬಾದಾಮಿ ಕ್ಷೇತ್ರದ ಜನ ಸಿದ್ದರಾಮಯ್ಯರನ್ನು ಸೋಲಿಸುತ್ತಾರೆ. ಹೀಗಾಗಿ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜಿ.ಟಿ. ದೇವೇಗೌಡ ಜೊತೆ ಸ್ನೇಹ ಬೆಳೆಸಿದ್ದಾರೆ. ಸಿದ್ದರಾಮಯ್ಯ ಜೊತೆಗೆ ಕೈ ಜೋಡಿಸಿ ನೀವು ಒಬ್ಬ ಅವಕಾಶವಾದಿ ರಾಜಕಾರಣಿ ಆಗಬೇಡಿ ಎಂದು ಜಿ.ಟಿ. ದೇವೇಗೌಡರಿಗೆ ಸಲಹೆ ನೀಡಿದರು.

ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗಗಳಿಗೆ ಏನೂ ಮಾಡಲಿಲ್ಲ. ಹೀಗಾಗಿ ದಲಿತರು, ಹಿಂದುಳಿದವರು ಕಾಂಗ್ರೆಸ್ ಅನ್ನು ದೂರ ಮಾಡಿದ್ದಾರೆ. ಬಿಜೆಪಿಯನ್ನು ಬ್ರಾಹ್ಮಣರ ಪಕ್ಷ ಅನ್ನುತ್ತಿದ್ದರು, ಆದರೆ ಈಗ ಆ ಪರಿಸ್ಥಿತಿ ಇಲ್ಲ. ಹಿಂದುಳಿದವರು, ದಲಿತರು ನಮ್ಮ ಜೊತೆ ಬರುತ್ತಿದ್ದಾರೆ" ಎಂದು ಈಶ್ವರಪ್ಪ ಹೇಳಿದರು.

"ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎಚ್.ಡಿ. ದೇವೇಗೌಡರ ಭೇಟಿ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನೀಡಿದ ಗೌರವವನ್ನು ಸಿದ್ದರಾಮಯ್ಯ ನೋಡಿರಬೇಕು. ಸಿದ್ದರಾಮಯ್ಯನವರು ಇದನ್ನು ನೋಡಿ ಕಲಿಯಬೇಕಿದೆ. ಎಲ್ಲರನ್ನೂ ಏಕವಚನದಲ್ಲಿ ಸಿದ್ದರಾಮಯ್ಯ ಕರೆಯುತ್ತಾರೆ.‌ ಹೀಗಾಗಿ, ಅವರಿಗೆ ಅದೇ ರೀತಿಯಲ್ಲಿ ನಾವು ಉತ್ತರ ಕೊಡುತ್ತಿದ್ದೇವೆ. ನರೇಂದ್ರ ಮೋದಿ ಮತ್ತು ದೇವೇಗೌಡರ ಭೇಟಿ ರಾಷ್ಟ್ರದ ರಾಜಕಾರಣಿಗಳಿಗೆ ಮಾದರಿ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com