ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಭಜಿತ ಬಳ್ಳಾರಿಯನ್ನು ಮತ್ತೆ ಒಗ್ಗೂಡಿಸಲಾಗುವುದು- ಕಾಂಗ್ರೆಸ್ ಶಾಸಕ

ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕರೊಬ್ಬರು, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿಭಜಿತ ಬಳ್ಳಾರಿಯನ್ನು ಮತ್ತೆ ಒಟ್ಟುಗೂಡಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಭರವಸೆ ನೀಡಿದರು. 

ಬೆಂಗಳೂರು/ಬಳ್ಳಾರಿ: ವಿಧಾನಪರಿಷತ್ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಇರುವಂತೆಯೇ, ಬಳ್ಳಾರಿ ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ.ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕರೊಬ್ಬರು, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿಭಜಿತ ಬಳ್ಳಾರಿಯನ್ನು ಮತ್ತೆ ಒಟ್ಟುಗೂಡಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಭರವಸೆ ನೀಡಿದರು. 

ಈ ವಿಷಯದ ಬಗ್ಗೆ ಸ್ಥಳೀಯ ನಾಡಿಮಿಡಿತದ ಮೇಲೆ ಬೆರಳಿಟ್ಟಿರುವ ಕಾಂಗ್ರೆಸ್ , ವಿಭಜಿತ ಬಳ್ಳಾರಿ ಜಿಲ್ಲೆಯಿಂದ ಹೆಚ್ಚಿನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಂತೋಷವಿಲ್ಲ ಎಂಬುದನ್ನು ಅರಿತುಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಲ್ಲೆಯನ್ನು ಮೂಲ ಸ್ಥಿತಿಗೆ ತರುವುದಾಗಿ ಶಾಸಕರು ಭರವಸೆ ನೀಡಿದರು. 

ಆದರೆ ಜಿಲ್ಲೆಗಳನ್ನು ವಿಭಜಿಸುವುದು ಮತ್ತು ಹೊಲಿಯುವುದು ಅಷ್ಟು ಸುಲಭವಲ್ಲ ಎಂದು ಇನ್ನೊಬ್ಬ ಕಾಂಗ್ರೆಸ್ಸಿಗರು ಅರಿತುಕೊಂಡಿದ್ದಾರೆ. ಈ ವಿಚಾರದಲ್ಲಿ ಎರಡು ಗುಂಪಿಗಳಿವೆ. ಒಂದು ಗುಂಪು ವಿಜಯನಗರ ವಿಭಜನೆಯನ್ನು ಬೆಂಬಲಿಸುತ್ತಿದ್ದರೆ ಮತ್ತೊಂದು ಗುಂಪು ವಿಭಜನೆಯನ್ನು ವಿರೋಧಿಸುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮತ್ತೋರ್ವ ಕಾಂಗ್ರೆಸ್ ಪಕ್ಷದ ಮುಖಂಡರು ಹೇಳಿದರು. 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಈಶ್ವರ್ ಖಂಡ್ರೆ ಅವರನ್ನು ಸಂಪರ್ಕಿಸಿದಾಗ, ಇದು ಅವರ ವೈಯಕ್ತಿಕ ಅಭಿಪ್ರಾಯ ಮತ್ತು ಪಕ್ಷ ಸರಿಯಾದ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
 

Related Stories

No stories found.

Advertisement

X
Kannada Prabha
www.kannadaprabha.com