ಬೆಳಗಾವಿಯಿಂದ ವಾರಣಾಸಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ...
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಕಲಾಪಕ್ಕೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಕಲಾಪಕ್ಕೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ
Updated on: 

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ವಾರಾಣಸಿಗೆ ತೆರಳಿದ್ದಾರೆ.

ವಾರಣಾಸಿಗೆ ತೆರಳುವ ಮುನ್ನ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಾರಾಣಸಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸಿ ಹಿಂದಿರುಗುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಹೇಗೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಚರ್ಚೆಯಾಗಲಿದೆ ಎಂದರು.

ಈ ಸಭೆಯಲ್ಲಿ ಭಾಗವಹಿಸಿ ನಾಳೆ ಸಂಜೆ ಬೆಳಗಾವಿಗೆ ಹಿಂದಿರುಗಿ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಾಗಿ ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com