ಪರಿಷತ್ ಫಲಿತಾಂಶ: ಬಿಜೆಪಿ ಭದ್ರಕೋಟೆ ಬೆಳಗಾವಿ, ಧಾರವಾಡದಲ್ಲಿ ಕಾಂಗ್ರೆಸ್ ಗೆಲುವು, ಹಾಸನದಲ್ಲಿ ಸೂರಜ್ ಗೆ ಜಯ

ತೀವ್ರ ಕುತೂಹಲ ಕೆರಳಿಸಿದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 11 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್  ಗೆಲುವು ಸಾಧಿಸಿದೆ
ವಿಜೇತ ಅಭ್ಯರ್ಥಿಗಳು
ವಿಜೇತ ಅಭ್ಯರ್ಥಿಗಳು

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 11 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್  ಗೆಲುವು ಸಾಧಿಸಿದೆ. 1 ಕ್ಷೇತ್ರದಲ್ಲಿ ಬಿಜೆಪಿ, 4 ಕ್ಷೇತ್ರಗಳಲ್ಲಿ ಕೈ ಮುನ್ನಡೆ ಕಾಯ್ದುಕೊಂಡಿದೆ.  ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಬಿಜೆಪಿ ಕೈ ತಪ್ಪಿದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಎಸ್. ವಿ ರವಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜ್ ಹಟ್ಟಿಹೊಳಿ ವಿಜೇತರಾಗಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಕೊಡಗು ಕ್ಷೇತ್ರದಲ್ಲಿ ನೂರಾ ಐದು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಇವರಿಗೆ 705 ಮತಗಳು ಬಂದಿದ್ದು, ಕಾಂಗ್ರೆಸ್ ನ ಮಂಥರ್ ಗೌಡ ಅವರಿಗೆ 603 ಮತಗಳು ಸಿಕ್ಕಿವೆ.

ಇದನ್ನೂ ಓದಿ: ಸಾವಿರ 'ಕೋಟಿ'ಗಳಿದ್ದರೂ ಅದೃಷ್ಟ ಖೋತಾ: ಪರಿಷತ್ ಚುನಾವಣೆಯಲ್ಲಿ 'ಕೆಜಿಎಫ್ ಬಾಬು' ಗೆ ಹೀನಾಯ ಸೋಲು!
ಬೆಂಗಳೂರು ನಗರದಲ್ಲಿ ಬಿಜೆಪಿ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನ ಕೆಜಿಎಫ್ ಬಾಬು ಸೋತಿದ್ದಾರೆ. 
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ , ಉತ್ತರ ಕನ್ನಡ- ಬಿಜೆಪಿ ಅಭ್ಯರ್ಥಿ ಗಣಪತಿ ಗಣಪತಿ ಉಳ್ವೇಕರ್ ,
ಬಳ್ಳಾರಿ- ಬಿಜೆಪಿ ಅಭ್ಯರ್ಥಿ ವೈ.ಎಂ.ಸತೀಶ್ , ಚಿಕ್ಕಮಗಳೂರು-ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ,ದಾವಣಗೆರೆ- ಚಿತ್ರದುರ್ಗ-ಬಿಜೆಪಿ ಅಭ್ಯರ್ಥಿ ಕೆ ಎಸ್ ನವೀನ್, ಗುಲ್ಬರ್ಗ, ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಗೆಲುವು ಸಾಧಿಸಿದ್ದಾರೆ. 

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಜಯ ಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಸೋಲನ್ನುಭವಿಸಿದ್ದಾರೆ. ಧಾರವಾಡ- ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್, ಮಂಡ್ಯ- ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ, ಕೋಲಾರ-ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ , ಧಾರವಾಡ- ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ,ಬಿಜಾಪುರ- ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ. 

ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ಗರಿ ಮೂಡಿಸಿಕೊಂಡಿದ್ದಾರೆ. ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಸೂರಜ್ ರೇವಣ್ಣ, 2247 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ವಿಶ್ವನಾಥ್ 374 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಎ ಶಂಕರ್ 747 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

ದಕ್ಷಿಣ ಕನ್ನಡ- ಉಡುಪಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 3062 , ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ 2077 ಮೊದಲ ಪ್ರಾಶಸ್ತ್ಯದ ಮತಗಳು ಸಿಕ್ಕಿವೆ. ಆದಾಗ್ಯೂ, ಅಂತಿಮ ಫಲಿತಾಂಶದ ಘೋಷಣೆ ಹೊರ ಬೀಳಬೇಕಾಗಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ವಿಜಯೋತ್ಸಾವ ಆಚರಿಸುತ್ತಿದ್ದಾರೆ.

ರಾಜ್ಯ ವಿಧಾನಪರಿಷತ್‌ ಚುನಾವಣೆಯ ಎಲ್ಲ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಆಯಾ ರಾಜಕೀಯ ಪಕ್ಷಗಳು ಜಯಗಳಿಸಿರುವ ವಿವರಗಳು ಇಂತಿದೆ.

ಬಿಜೆಪಿ = 12 ಗೆಲುವು

ಬೆಂಗಳೂರು ನಗರ – ಗೋಪಿನಾಥ ರೆಡ್ಡಿ
ಮಡಿಕೇರಿ – ಸುಜಾ ಕುಶಾಲಪ್ಪ
ಶಿವಮೊಗ್ಗ – ಡಿ.ಎಸ್.ಅರುಣ್
ಚಿತ್ರದುರ್ಗ – ಕೆಎಸ್ ನವೀನ್
ಬಳ್ಳಾರಿ – ವೈಎಂ ಸತೀಶ್
ಉತ್ತರ ಕನ್ನಡ – ಗಣಪತಿ ಉಳ್ವೇಕರ್
ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ
ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್
ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ

ಕಾಂಗ್ರೆಸ್ - 11

ಬೀದರ್ – ಭೀಮರಾವ್ ಬಿ ಪಾಟೀಲ್
ತುಮಕೂರು – ರಾಜೇಂದ್ರ
ಕೋಲಾರ – ಎಂ.ಎಲ್. ಅನಿಲ್ ಕುಮಾರ್
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್
ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ
ಮಂಡ್ಯ – ದಿನೇಶ್ ಗೂಳಿಗೌಡ
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ
ಬೆಳಗಾವಿ-ಚಿಕ್ಕೋಡಿ ಚನ್ನರಾಜು
ಬೆಂಗಳೂರು ಗ್ರಾಮಾಂತರ – ಎಸ್.ರವಿ

ಜೆಡಿಎಸ್- 1

ಹಾಸನ – ಸೂರಜ್ ರೇವಣ್ಣ

ಪಕ್ಷೇತರ - 1

ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ

ದ್ವಿಸದಸ್ಯತ್ವ

ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)

ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)

ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)

ಮೈಸೂರು – ಚಾಮರಾಜನಗರ – ರಘು ಕೌಟಿಲ್ಯ (ಬಿಜೆಪಿ)

ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)

ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)

ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)

ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)

ಬೆಳಗಾವಿ-ಚಿಕ್ಕೋಡಿ - ಚನ್ನರಾಜು (ಕಾಂಗ್ರೆಸ್)

ಬೆಳಗಾವಿ-ಚಿಕ್ಕೋಡಿ - ಲಖನ್ ಜಾರಕಿಹೊಳಿ (ಪಕ್ಷೇತರ)

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com