ಡಿಕೆ ಶಿವಕುಮಾರ್
ರಾಜಕೀಯ
ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್
ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಹಲವು ಕಡೆ ಕೊನೆ ಕ್ಷಣಕ್ಕೆ ಅಭ್ಯರ್ಥಿ ಹಾಕಿ ಅಲ್ಪ ಮತದಿಂದ ಸೋತಿದ್ದೇವೆ. ನಮ್ಮ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ ಎಂದರು.
ಆಡಳಿತಾರೂಢ ಪಕ್ಷಕ್ಕೆ ಒಂದು ಲಾಭ ಇದ್ದೇಯಿದೆ. ಅದನ್ನು ಅವರು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಸೋತ ಕಡೆಈ ಬಾರಿ ನಾವು ಗೆದ್ದಿದ್ದೇವೆ. ಕೆಲವು ಕಡೆ ಸೀಟು ಕಳೆದುಕೊಂಡಿರುವುದಾಗಿ ತಿಳಿಸಿದರು.
ಪರಿಷತ್ ನಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ಅದನೆಲ್ಲಾ ನಾವು ಲೆಕ್ಕ ಹಾಕಿಲ್ಲ. ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದೇವೆ. ಒಟ್ಟಾರೇ ಫಲಿತಾಂಶ ಸಮಾಧಾನ ತಂದಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ