ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸಿ: ಸರ್ಕಾರಕ್ಕೆ ಸಲೀಂ ಅಹ್ಮದ್ ಆಗ್ರಹ

ಆದಷ್ಟು ಶೀಘ್ರವೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರವೇ ನಡೆಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯಿಸಿದ್ದಾರೆ.
ಸಲೀಂ ಅಹ್ಮದ್
ಸಲೀಂ ಅಹ್ಮದ್
Updated on

ಬೆಂಗಳೂರು: ಆದಷ್ಟು ಶೀಘ್ರವೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರವೇ ನಡೆಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಬಿಜೆಪಿ ಸರ್ಕಾರ ಪಂಚಾಯಿತಿಗಳನ್ನು ನಿರ್ಲಕ್ಷ್ಯ ಮಾಡಿದೆ.  ಹೀಗಾಗಿ ಚುನಾವಣೆಗಳನ್ನು ಮುಂದೂಡುತ್ತಾ ಬಂದಿದೆ,  ರಾಜ್ಯದ ಜನತೆ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ ಎಂಬುದು ಪರಿಷತ್ ಚುನಾವಣೆಯಲ್ಲಿ ಸಾಬೀತಾಗಿದೆ.  ಕಳೆದ ಪರಿಷತ್ ಚುನಾವಣೆಯಲ್ಲಿ 11 ಸ್ಥಾನ ಗೆದ್ದಿದೆ.  ನಾವು 48ರಷ್ಟು ಮತಗಳನ್ನು ಪಡೆದಿದ್ದೇವೆ. 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ಇದು ಸ್ಪಷ್ಟ ಸೂಚನೆಯಾಗಿದೆ ಅವರು ಹೇಳಿದರು.

ಪಕ್ಷವು 50 ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸಲು ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದೆ, ಅವರು ಕಾಂಗ್ರೆಸ್ ಅನ್ನು ಸಾಮೂಹಿಕ ಆಧಾರಿತ ಪಕ್ಷದಿಂದ ಕೇಡರ್ ಆಧಾರಿತ ಪಕ್ಷವನ್ನಾಗಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪಕ್ಷ ತೊರೆದಿರುವ ಹಲವು ಮುಖಂಡರು ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ, ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರಲು ಇಚ್ಛಿಸುವವರು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಮತ್ತು ಅವರನ್ನು ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿಗೆ ಕಳುಹಿಸಲಾಗುವುದು ಎಂದು ಹೇಳಿದರು.

ರಾಜಕೀಯ ಪಕ್ಷಗಳು ಹಣದ  ಹೊಂದಿರುವವರಿಗೆ ಪರಿಷತ್ತಿನಲ್ಲಿ ಟಿಕೆಟ್ ನೀಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಹಮದ್, ಎಸ್.ಎಂ.ಕೃಷ್ಣ ಮತ್ತು ಧರಂ ಸಿಂಗ್ ಸರ್ಕಾರದ ಅವಧಿಯಲ್ಲಿ ಪರಿಷತ್ತಿನಲ್ಲಿ ಮುಖ್ಯ ಸಚೇತಕರಾಗಿ ಕೆಲಸ ಮಾಡಿದ ಅಹಮದ್, ಹಲವು ಬದಲಾವಣೆಗಳನ್ನು ತರುವ ಅಗತ್ಯವಿದ್ದು, ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com