ಬಿಜೆಪಿ ಕಾರ್ಯಕಾರಣಿ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷದ ಸಾಧನೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮತ್ತು ಮತಾಂತರ ವಿರೋಧಿ ಮಸೂದೆಗೆ ಒತ್ತು ನೀಡುವ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷದ ಸಾಧನೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮತ್ತು ಮತಾಂತರ ವಿರೋಧಿ ಮಸೂದೆಗೆ ಒತ್ತು ನೀಡುವ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಸಭೆಯಲ್ಲಿ ನಾವು ಪಕ್ಷದ ಸಂಘಟನೆ ಮತ್ತು ಇತರ ಬೆಳವಣಿಗೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸುತ್ತೇವೆ. ಪ್ರತಿ ಎರಡು ತಿಂಗಳಿಗೊಮ್ಮೆ ನಡೆಯುವ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯತೆ ಉತ್ತಮವಾಗಿದೆ. ಸರ್ಕಾರ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಿ, ಉತ್ತಮ ಕೆಲಸ ಮಾಡಿದ ನಂತರ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್‌.ರವಿಕುಮಾರ್‌ ಅವರು ಮಾತನಾಡಿ, ಸಭೆಯಲ್ಲಿ ಪಕ್ಷ ಸಂಘಟನೆ ಬಲವರ್ಧನೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ವಿಶೇಷವಾಗಿ ಬೆಳಗಾವಿ, ಮೈಸೂರು, ಹಾಸನ ಮತ್ತು ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಸಾಧನೆ ಕುರಿತು ವಿವರವಾಗಿ ಚರ್ಚಿಸುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಪಕ್ಷದ ಮುಖಂಡ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಸೋಲಿಸಿದ್ದಾರೆ. ಐದು ದ್ವಿಸದಸ್ಯ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದರೂ ಪರಿಷತ್ತಿನಲ್ಲಿ ಮಂಡನೆಯಾಗದ ಮತಾಂತರ ವಿರೋಧಿ ಮಸೂದೆಯೂ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com