ಮತಾಂತರ ನಿಷೇಧ ಕಾಯ್ದೆ ವಿರುದ್ಧ ಪ್ರತಿಭಟನೆ ನಿಲ್ಲಿಸುವುದಿಲ್ಲ: ತನ್ವೀರ್ ಸೇಠ್

ಮತಾಂತರ ನಿಷೇಧ ಕಾಯ್ದೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೇಳಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಅವರು,ಧರ್ಮ ಪರಿವರ್ತನೆಗಿಂತ ಪಕ್ಷಾಂತರ ಅತ್ಯಂತ ಅಪಾಯಕಾರಿಯಾಗಿದ್ದು, ಪಕ್ಷಾಂತರಿಗಳಿಂದಲೇ ರಚನೆಯಾದ ಬಿಜೆಪಿ ಸರ್ಕಾರದಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ.
ತನ್ವೀರ್‌ ಸೇಠ್‌
ತನ್ವೀರ್‌ ಸೇಠ್‌

ಮೈಸೂರು: ಮತಾಂತರ ನಿಷೇಧ ಕಾಯ್ದೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೇಳಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಅವರು,ಧರ್ಮ ಪರಿವರ್ತನೆಗಿಂತ ಪಕ್ಷಾಂತರ ಅತ್ಯಂತ ಅಪಾಯಕಾರಿಯಾಗಿದ್ದು, ಪಕ್ಷಾಂತರಿಗಳಿಂದಲೇ ರಚನೆಯಾದ ಬಿಜೆಪಿ ಸರ್ಕಾರದಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ.

ಮೈಸೂರಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಾಂತರಕ್ಕಿಂತಲೂ ಈಗ ಪಕ್ಷಾಂತರ ಅಪಾಯಕಾರಿ. ಪಕ್ಷಾಂತರಿಗಳಿಂದ ನಡೆಯುತ್ತಿರುವ ಸರ್ಕಾರಕ್ಕೆ ಈ ಕಾಯ್ದೆಯನ್ನು ಜಾರಿಗೆ ತರುವ ನೈತಿಕತೆ ಇಲ್ಲ. ಯಾರು ಯಾವ ಧರ್ಮಕ್ಕೆ ಬೇಕಾದರೂ ಹೋಗಬಹುದು. ನಮ್ಮದು ಜಾತ್ಯತೀತ ರಾಷ್ಟ್ರ. ನಮಗೆ ಸಂವಿಧಾನ ಎಲ್ಲಾ ರೀತಿಯ ಧಾರ್ಮಿಕ ಸ್ವಾತಂತ್ರ‍್ಯ ನೀಡಿದೆ. ಧಾರ್ಮಿಕ ಸ್ವಾತಂತ್ರ‍್ಯ ಪ್ರತಿಯೊಬ್ಬ ಪ್ರಜೆಯ ಹಕ್ಕಾಗಿದೆ ಎಂದು ಹೇಳಿದರು.

ಒಂದು ವೇಳೆ ಈ ಮಸೂದೆ ಅಂಗೀಕಾರ ಆದರೂ ಅದರ ವಿರುದ್ಧ ಹೋರಾಟ ಮಾಡುತ್ತೇವೆ. ಕೃಷಿ ಕಾಯ್ದೆಗಳ ವಿರುದ್ಧ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಾಯ್ದೆಗಳನ್ನ ವಾಪಸ್ ಪಡೆಯಿತು. ಅದೇ ಮಾದರಿಯಲ್ಲಿ ಮತಾಂತರ ನಿಷೇಧ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತೇವೆ. ಸದ್ಯದ ಪರಿಸ್ಥಿತಿಯಲ್ಲಿ ಒಬ್ಬ ವ್ಯಕ್ತಿ ಮತಾಂತರ ಆಗಲು ಒಂದು ತಿಂಗಳ ಮುಂಚಿತವಾಗಿ ಅರ್ಜಿ ಹಾಕಿ ಬದುಕುವ ವಾತಾವರಣ ಈಗಿನ ಸರ್ಕಾರದಲ್ಲಿ ಇದೆಯೇ ಎಂಬುದನ್ನು ಆಲೋಚಿಸಬೇಕಿದೆ. ಈ ದಿಸೆಯಲ್ಲಿ ಕಾಯ್ದೆ ಪುನರ್ ಪರಿಶೀಲನೆ ಆಗಬೇಕಿದೆ ಎಂದು ತಿಳಿಸಿದರು.

ಇದೇ ವೇಳೆ ಡಿಸೆಂಬರ್ 31 ರಂದು ಕರೆ ನೀಡಿರುವ ಬಂದ್ ಕರೆಗೆ ರಾಜ್ಯ ಸರ್ಕಾರ ಸ್ವಯಂಪ್ರೇರಿತವಾಗಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದು, ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com