ಸಿದ್ದರಾಮಯ್ಯ ಓರ್ವ ಹಗಲುಗನಸುಗಾರ: ಇಂಧನ ಸಚಿವ ವಿ. ಸುನೀಲ್ ಕುಮಾರ್

2023ರ ವಿಧಾನಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿಯಾಗುತ್ತೇನೆಂದು ಭಾವಿಸಿರುವ ಸಿದ್ದರಾಮಯ್ಯ ಅವರು, ವಿಷಯಗಳ ಕುರಿತು ಹೇಳಿಕೆಗಳ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಓರ್ವ ಹಗಲುಕನಸುಗಾರ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ವಿ.ಸುನೀಲ್ ಕುಮಾರ್
ವಿ.ಸುನೀಲ್ ಕುಮಾರ್
Updated on

ಚಿತ್ರದುರ್ಗ: 2023ರ ವಿಧಾನಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿಯಾಗುತ್ತೇನೆಂದು ಭಾವಿಸಿರುವ ಸಿದ್ದರಾಮಯ್ಯ ಅವರು, ವಿಷಯಗಳ ಕುರಿತು ಹೇಳಿಕೆಗಳ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಓರ್ವ ಹಗಲುಕನಸುಗಾರ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂಡಿಗೆ ಮಾತನಾಡಿರುವ ಅವರು, 2023ರಲ್ಲಿ ತಮ್ಮ ಸರ್ಕಾರವು ಮತಾಂತರ ನಿಷೇಧ, ಗೋಹತ್ಯೆ ತಡೆ ಕಾಯ್ದೆಗಳ ರದ್ದುಪಡಿಸಿ, ಟಿಪ್ಪು ಜಯಂತಿ ಆಚರಣೆಯನ್ನು ಪುನರಾರಂಭಿಸಲಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಾರೆ. ಜನರು ಸಿದ್ದರಾಮಯ್ಯ ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ತನ್ನ 2018 ರ ಪ್ರಣಾಳಿಕೆಗೆ ಬದ್ಧವಾಗಿದೆ ಮತ್ತು ಸಮಾಜದ ದೊಡ್ಡ ವರ್ಗಕ್ಕೆ ಅಗತ್ಯವಿರುವುದರಿಂದ ಸರ್ಕಾರವು ಮತಾಂತರ ವಿರೋಧಿ ಮಸೂದೆಯನ್ನು ಪರಿಚಯಿಸಿದೆ. ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಬಡವರನ್ನು ಆಮಿಷವೊಡ್ಡುವ ಮೂಲಕ ಬಲವಂತದ ಮತಾಂತರವ ಮಾಡುತ್ತಿರುವುದನ್ನು ಮತಾಂತರ ನಿಷೇಧ ಕಾಯ್ದ ತಡೆಯುತ್ತದೆ ಮತ್ತು ಮತಾಂತರಗೊಳ್ಳುವವರು ಕೆಲವು ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಬೇಕಾಗುತ್ತದೆ ಎಂದು ಕಾಯ್ದೆ ಕುರಿತು ವಿವರಿಸಿದ್ದಾರೆ.

ಸಿದ್ದರಾಮಯ್ಯ ಅವರು ಮಸೂದೆಯ ಮಹತ್ವವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಪರಿವರ್ತನೆ-ವಿರೋಧಿ ಮಸೂದೆಯನ್ನು ರದ್ದುಗೊಳಿಸುವ ಅವರ ಹೇಳಿಕೆಯು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ. ಮತ್ತು ಅದರ ನಿಲುವನ್ನು ಬದಲಾಯಿಸಲು ಸರ್ಕಾರದ ಮೇಲೆ ಅನಗತ್ಯ ಒತ್ತಡವನ್ನು ತರುತ್ತದೆ. ಆದರೆ, ಏನೇ ಒತ್ತಡ ಬಂದರೂ ನಮ್ಮ ನಿರ್ಧಾರದ ಕುರಿತು ನಾವು ದೃಢವಾಗಿದ್ದೇವೆ ಎಂದಿದ್ದಾರೆ.

ಇದೇ ವೇಳೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಎಂಇಎಸ್ ಪುಂಡಾಟಿಕೆ ಕುರಿತು ಮಾತನಾಡಿ, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಗೂಂಡಾಗಿರಿಯನ್ನು ಸರ್ಕಾರ ಸಹಿಸುವುದಿಲ್ಲ. ನಮ್ಮ ನೆಲದ ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಸರ್ಕಾರ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವಾಗ ಕರ್ನಾಟಕ ಬಂದ್‌ನ ಅಗತ್ಯ ಏನಿದೆ ಎಂದು ಪ್ರಶ್ನಿಸಿದ್ದಾರೆ.

ಬಳಿಕ 2023 ರ ಚುನಾವಣೆಯಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಹೋರಾಟ ನಡೆಯಲಿದೆ ಎಂದು ಪುನರುಚ್ಚರಿಸಿದ ಅವರು, ಬೊಮ್ಮಾಯಿಯವರ ನಾಯಕತ್ವವನ್ನು ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಕೊಂಡಿದ್ದಾರೆ. ಮತ್ತೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲೂ ಅರುಣ್ ಸಿಂಗ್ ಒಪ್ಪಿಕೊಂಡಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com