ರಾಜಕೀಯ

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟಕ್ಕೆ 'ವೆಲ್ ಡನ್' ಎಂದ ರಾಹುಲ್!

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ತಂಡವನ್ನು ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟಕ್ಕೆ 'ವೆಲ್ ಡನ್' ಎಂದ ರಾಹುಲ್!
ರಾಹುಲ್ ಗಾಂಧಿ ಮತ್ತಿತರರ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ತಂಡವನ್ನು ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವೆಲ್ ಡನ್, ಟೀಮ್ ಕಾಂಗ್ರೆಸ್ ಎಂದಿದ್ದಾರೆ.

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಎಂದಿನಂತೆ ಪ್ರಬಲವಾಗಿ ಮುಂದುವರೆಯುತ್ತೇವೆ. ಧನ್ಯವಾದಗಳು ರಾಹುಲ್ ಗಾಂಧಿ ಜೀ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. 

ಹಣಬಲದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯದ ಜನತೆಗೆ ಬಿಜೆಪಿಗೆ ತೋರಿಸಿಕೊಟಿದ್ದಾರೆ. ಈ ಫಲಿತಾಂಶ ಜನ ವಿರೋಧಿ ಮತ್ತು ಭ್ರಷ್ಟ ಬಿಜೆಪಿಗೆ ತಕ್ಕ ಪಾಠವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.