ಆಪ್ತ ಸಹಾಯಕರ ಮೂಲಕ ಸಚಿವರ ಭ್ರಷ್ಟಾಚಾರ: ಶ್ರೀರಾಮುಲು ರಾಜಿನಾಮೆ ನೀಡಲಿ; ಕಾಂಗ್ರೆಸ್ 

ವಂಚನೆ ಪ್ರಕರಣದಲ್ಲಿ ಶ್ರೀರಾಮುಲು ಅವರ ಆಪ್ತ ಸಹಾಯಕನ ಬಂಧನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹರಿಹಾಯ್ದಿದೆ.
ಶ್ರೀರಾಮುಲು
ಶ್ರೀರಾಮುಲು
Updated on

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಶ್ರೀರಾಮುಲು ಅವರ ಆಪ್ತ ಸಹಾಯಕನ ಬಂಧನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ವಂಚನೆ ಪ್ರಕರಣದಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕನ ಬಂಧನದಿಂದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಸರ್ವವ್ಯಾಪ್ತಿಯಾಗಿರುವುದಕ್ಕೆ ಮತ್ತೊಂದು ನಿದರ್ಶನ, ಸಚಿವರುಗಳು ತಮ್ಮ ಸಹಾಯಕರ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ.

ನೈತಿಕ ಹೊಣೆ ಹೊತ್ತು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು  ಅವರು ಕೂಡಲೇ ರಾಜೀನಾಮೆ ನೀಡಬೇಕು, ಇದರಲ್ಲಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಯಬೇಕು ಸಚಿವರುಗಳು ತಮ್ಮ ಸಹಾಯಕರ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com