
ಬೆಂಗಳೂರು: ಪಕ್ಷ ಬಿಟ್ಟು ಬಿಜೆಪಿ ಸೇರಿದ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ಅಧ್ಯಕ್ಷರ ಜೊತೆ ಮಾತನಾಡುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂಡಿದೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಪಕ್ಷ ಬಿಟ್ಟು ಹೋದ 14 ಜನರನ್ನು ಸೇರಿಸಿಕೊಳ್ಳುತ್ತೇನೆಂದು ಡಿಕೆ.ಶಿವಕುಮಾರ್ ಹೇಳಿದ್ದಾರೆಂಬ ಮಾಧ್ಯಮ ವಿಶ್ಲೇಷಣೆ ಸರಿಯಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋದ 14 ಮಂದಿಯನ್ನು ಕಾಂಗ್ರೆಸ್'ಗೆ ಸೇರ್ಪಡೆಗೊಳಿಸಿಕೊಳ್ಳುವುದಿಲ್ಲ. ಈ ಕುರಿತು ಡಿಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಲಾಗುತ್ತದೆ. ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧನಾಗಿದ್ದೇನೆ. ಈ ಹಿಂದೆ ವಿಧಾನಸಭೆಯಲ್ಲಿ ಪ್ರಳಯವಾದರೂ 14 ಮಂದಿಯನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದು ನಿಜ ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿ,ಕೆ.ಶಿವಕುಮಾರ್ ಅವರು, ಯಾರ್ ಯಾರ್ ಕಾಂಗ್ರೆಸ್ ಬರಬೇಕು ಅಂತ ಬಯಸಿದ್ದಾರೆ ಅವರೆಲ್ಲರಿಗೂ ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಮೊದಲು ಅರ್ಜಿ ಹಾಕಲಿ, ಆಮೇಲೆ ನಮ್ಮ ಸಮಿತಿ ಮುಂದಿಡುತ್ತೇವೆ, ಅವರು ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದ್ದರು.
ಈ ಹಿಂದೆ ಕಾಂಗ್ರೆಸ್ ಬಿಟ್ಟು ಹೋದ 17 ಮಂದಿ ನನ್ನ ಸಂಪರ್ಕ ಮಾಡಿಲ್ಲ. ಬೇರೆಯವರು ಸಂಪರ್ಕ ಮಾಡಿದ್ದಾರೆ. ಆ 17 ಮಂದಿ ಅರ್ಜಿ ಹಾಕಬಹುದಾ ಎಂದು ಕೇಳಿದಾಗ ಯಾರು ಬೇಕಾದ್ರು ಅರ್ಜಿ ಹಾಕಬಹುದು, ಆದರೆ ಅಂತಿಮವಾಗಿ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ರಾಜಕೀಯದಲ್ಲಿ ಪಕ್ಷದಿಂದ ಬಿಟ್ಟು ಹೋಗುವುದು, ಮತ್ತೆ ಬರುವುದು ಸಾಮಾನ್ಯ ಎಂದು ತಿಳಿಸಿದ್ದರು.
Advertisement