3ನೇ ಬಾರಿ ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್‌ಗೆ ಕೊನೆಗೂ ಒಲಿದ ಮಂತ್ರಿಗಿರಿ ಭಾಗ್ಯ

ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆಯಲ್ಲಿ ಕರ್ನಾಟಕದ ನಾಲ್ವರು ಸಂಸದರಿಗೆ ಸಚಿವಗಿರಿ ನೀಡಲಾಗಿದೆ. ರಾಜ್ಯದ ಮೂವರು ಲೋಕಸಭಾ ಸದಸ್ಯರ ಜೊತೆ ಒಬ್ಬ ರಾಜ್ಯಸಭೆ ಸದಸ್ಯರಿಗೆ ಮಂತ್ರಿಗಿರಿ ಭಾಗ್ಯ ಒಲಿದು ಬಂದಿದೆ.
ರಾಜೀವ್ ಚಂದ್ರಶೇಖರ್‌
ರಾಜೀವ್ ಚಂದ್ರಶೇಖರ್‌

ಬೆಂಗಳೂರು: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆಯಲ್ಲಿ ಕರ್ನಾಟಕದ ನಾಲ್ವರು ಸಂಸದರಿಗೆ ಸಚಿವಗಿರಿ ನೀಡಲಾಗಿದೆ. ರಾಜ್ಯದ ಮೂವರು ಲೋಕಸಭಾ ಸದಸ್ಯರ ಜೊತೆ ಒಬ್ಬ ರಾಜ್ಯಸಭೆ ಸದಸ್ಯರಿಗೆ ಮಂತ್ರಿಗಿರಿ ಭಾಗ್ಯ ಒಲಿದು ಬಂದಿದೆ.

ಕರ್ನಾಟಕದಿಂದ ಲೋಕಸಭೆಗೆ ಆಯ್ಕೆ ಆಗಿರುವ ಸಂಸದ ಭಗವಂತ್ ಖೂಬಾ, ಸಂಸದ ಎ ನಾರಾಯಣಸ್ವಾಮಿ, ಸಂಸದೆ ಶೋಧಾ ಕರಂದ್ಲಾಜೆ ಹಾಗೂ ರಾಜ್ಯಸಭೆಗೆ ಆಯ್ಕೆ ಆಗಿರುವ ಸಂಸದ ರಾಜೀವ್ ಚಂದ್ರಶೇಖರ್ ಪಾಲಿಗೆ ಈ ಬಾರಿ ಸಚಿವ ಸ್ಥಾನ ದೊರೆತಿದೆ.

ಭಾರತದಲ್ಲಿ ಹಿರಿಯ ಪತ್ರಕರ್ತರಾಗಿ, ಉದ್ಯಮಿಯಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. 

2018ರಲ್ಲಿ ರಾಜೀವ್ ಚಂದ್ರಶೇಖರ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜೀವ್ ಚಂದ್ರಶೇಖರ್ ಅವರಿಗೆ ಮೋದಿಯವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಹೇಳಲಾಗುತ್ತಿತ್ತು. ಆದರೆ, ಎರಡು ಬಾರಿಯೂ ರಾಜೀವ್ ಚಂದ್ರಶೇಖರ್ ಅವರಿಗೆ ಸಚಿವ ಸ್ಥಾನ ಕೈಜಾರಿತ್ತು. 2 ವರ್ಷಗಳ ಸತತ ಕಾಯುವಿಕೆ ಬಳಿಕ ಕೊನೆಗೂ ರಾಜೀವ್ ಚಂದ್ರಶೇಖರ್ ಅವರು ಮೋದಿಯವರ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. 

ಕರ್ನಾಟಕದಿಂದ 2006ರಲ್ಲಿ ಮೊದಲ ಬಾರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್ ರಾಜ್ಯಸಭೆಗೆ ಆಯ್ಕೆಯಾದರು. ಅಲ್ಲಿಂದ ಆರು ವರ್ಷಗಳ ಅವಧಿಗೆ ಸತತ ಮೂರು ಬಾರಿ ರಾಜ್ಯಸಭೆಗೆ ರಾಜೀವ್ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ. 2018ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿಕೊಂಡ ರಾಜ್ಯದಿಂದ ಮೂರನೇ ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು.

ಪ್ರಸ್ತುತ ಸಂಸದ ರಾಜೀವ್ ಚಂದ್ರಶೇಖರ್ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿ ಗುರುತಿಸಿಕೊಂಡಿದ್ದಾರೆ. ಕೇರಳ ಬಿಜೆಪಿಯ ವೈಸ್ ಚೇರ್ ಮೆನ್ ಆಗಿದ್ದಾರೆ. ಇದರ ಜೊತೆಗೆ ಹಣಕಾಸು ಕುರಿತು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಹಾಗೂ ಸಾರ್ವಜನಿಕ ಖಾತೆಗಳ ಸಮಿತಿ (ಪಿಎಸಿ), ಡೇಟಾ ಸಂರಕ್ಷಣಾ ಮಸೂದೆ, 2019 ಮತ್ತು ಜಂಟಿ ಸಮಿತಿಯ ಸದಸ್ಯ, ಸಂವಹನ ಸಚಿವಾಲಯ, ವಿಶ್ವ ವ್ಯವಹಾರಗಳ ಭಾರತೀಯ ಮಂಡಳಿಯ ಸದಸ್ಯರಾಗಿ ರಾಜೀವ್ ಚಂದ್ರಶೇಖರ್ ಸೇವೆ ಸಲ್ಲಿಸುತ್ತಿದ್ದಾರೆ.

ರಾಜೀವ್ ಚಂದ್ರಶೇಖರ್ ಅವರು ಇತ್ತೀಚೆಗೆ ನಡೆದ ಪುದುಚೇರಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಪ್ರಮುಖ ಕಾರಣರೂ ಆಗಿದ್ದಾರೆ. 2007ರಲ್ಲಿ ಸಂಸತ್ ನಲ್ಲಿ 2ಜಿ ಹಗರಣವನ್ನು ಮೊದಲಿಗೆ ಪ್ರಸ್ತಾಪಿಸಿದ್ದರು. ಸ್ಪೆಕ್ಟ್ರಮ್ ಹರಾಜಿನಲ್ಲಿ ಭಾಗಿಯಾದವರ ಹೆಸರನ್ನು ಯಾವುದೇ ಅಂಜಿಕೆ ಇಲ್ಲದೆ ಹಾಗೂ ಯಾವುದೇ ಒತ್ತಡಕ್ಕೆ ಮಣಿಯದೆ ಬಹಿರಂಗಪಡಿಸಿದ್ದರು. ಒಬ್ಬರೇ ಈ ಹಗರಣದ ವಿರುದ್ಧ ಹೋರಾಟ ನಡೆಸಿದ ಕೀರ್ತಿ ರಾಜೀವ್ ಚಂದ್ರಶೇಖರ್ ಅವರಿಗೆ ಸಲ್ಲುತ್ತದೆ. 

ಇದಷ್ಟೇ ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಳಗಿಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ರಾಜೀವ್ ಚಂದ್ರಶೇಖರ್ ಅವರು ದೊಡ್ಡ ಪಾತ್ರವನ್ನೇ ವಹಿಸಿದ್ದರು. 

ರಾಜೀವ್ ಚಂದ್ರಶೇಖರ್ ಅವರು ಒಬ್ಬ ಉದ್ಯಮಿಯಾಗಿದ್ದು, ತಂತ್ರಜ್ಞಾನ, ಮಾಧ್ಯಮ, ಎನ್‌ಜಿಒಗಳು, ಸ್ಟಾರ್ಟ್ಅಪ್‌ಗಳು, ವಿಮಾನಯಾನ ಕ್ಷೇತ್ರಗಳಲ್ಲಿ ದೊಡ್ಡ ಹೂಡಿಕೆಗಳನ್ನು ಹೊಂದಿದ್ದಾರೆ.

ವಿವಿಧ ಸಂಸದೀಯ ಸಮಿತಿಗಳ ಸದಸ್ಯರಾಗಿರುವ ಚಂದ್ರಶೇಖರ್ ಅವರು, ಬಿಜೆಪಿಯ ರಾಷ್ಟ್ರೀಯ ವಕ್ತಾರರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪ್ರಾರಂಭಿಸಿರುವ ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್‌ನ ಉಪಾಧ್ಯಕ್ಷರಾಗಿದ್ದಾರೆ, 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com