ಬಿಎಸ್'ವೈ ವಿರುದ್ಧ ವಾಗ್ದಾಳಿ: ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ರೇಣುಕಾಚಾರ್ಯ ಮುಂದು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸ್ವಪಕ್ಷದ ಕೆಲ ಶಾಸಕರು ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಗುಡುಗಿರುವ ಶಾಸಕ ರೇಣುಕಾಚಾರ್ಯ ಅವರು, ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ಮುಂದಾಗಿದ್ದಾರೆ. 
ರೇಣುಕಾಚಾರ್ಯ
ರೇಣುಕಾಚಾರ್ಯ
Updated on: 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸ್ವಪಕ್ಷದ ಕೆಲ ಶಾಸಕರು ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಗುಡುಗಿರುವ ಶಾಸಕ ರೇಣುಕಾಚಾರ್ಯ ಅವರು, ಬಂಡಾಯ ಶಾಸಕರಿಗೆ ತಿರುಗೇಟು ನೀಡಲು ಮುಂದಾಗಿದ್ದಾರೆ. 

ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರು, ಕೆಲ ದಿಂಗಳಿಂದ ಸಚಿವ ಸಿಪಿ.ಯೋಗೇಶ್ವರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಶ್ ಹಾಗೂ ಎಂಎಲ್'ಸಿ ಎಹೆಚ್ ವಿಶ್ವನಾಥ್ ಅವರು ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಈ ಬೆಳವಣಿಗೆ ಸರಿಯಲ್ಲ, ಮಾನಹಾನಿಕಾರಕ ಎಂದು ಹೇಳಿದ್ದಾರೆ. 

ಸ್ವಪಕ್ಷ ನಾಯಕರೇ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಈ ಕುರಿತು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಕೇಂದ್ರೀಯ ನಾಯಕರಿಗೆ ದೂರು ನೀಡಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆಂದು ತಿಳಿಸಿದ್ದಾರೆ. 

ಭವಿಷ್ಯದ ಮುಖ್ಯಮಂತ್ರಿ ಕುರಿತು ಯಾರೂ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ತಮ್ಮ ನಾಯಕರಿಗೆ ಸೂಚನೆ ನೀಡಿದೆ. ಆದರೆ, ಬಿಜೆಪಿ ನಾಯಕರು ಮಾತ್ರ ಬಹಿರಂಗವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com