ಕೇಂದ್ರ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿಯ ಬಂಡಾಯ ಶಾಸಕರು ದೆಹಲಿಗೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿಯ ಬಂಡಾಯ ಶಾಸಕರು ದೆಹಲಿಗೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ. 

ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದ್ದಿಲ್ಲದೆ ದೆಹಲಿಗೆ ಭೇಟಿ ನೀಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಯತ್ನಾಳ್ ದೆಹಲಿ ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಪಿ ಯೋಗೇಶ್ವರ್ ಅವರು, ಈ ಬಗ್ಗೆ ಯತ್ನಾಳ್ ಅವರೊಂದಿಗೆ ಮಾತನಾಡಿದ್ದೇನೆ. ಭಗವಂತ್ ಖೂಬಾ ಅವರಿಗೆ ಅಭಿನಂದನೆಗಳನ್ನು ತಿಳಿಸುವ ಸಲುವಾಗಿ ದೆಹಲಿಗೆ ತೆರಳಿರುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ. 

ಈ ನಡುವೆ ಯಡಿಯೂರಪ್ಪ ವಿರುದ್ದ ಕೇಂದ್ರ ನಾಯಕರಿಗೆ ದೂರು ನೀಡಿದ್ದ ಶಾಸಕ ಅವರಿಂದ ಬೆಲ್ಲದ್ ಅವರು, ಬೆಂಗಳೂರಿಗೆ ಭೇಟಿ ನೀಡಿದ್ದು, ಎಂಎಲ್'ಸಿ ಎಹೆಚ್ ವಿಶ್ವನಾಥ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಈ ಎಲ್ಲಾ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು, ಯಡಿಯೂರಪ್ಪ ಅವರಿಗೆ 120 ಶಾಸಕರ ಬೆಂಬಲವಿದೆ. ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೈಕಮಾಂಡ್'ಗೆ ಆಗ್ರಹಿಸಲಾಗುತ್ತದೆ. ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ. 

ರೇಣುಕಾಚಾರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಯೋಗೇಶ್ವರ್ ಅವರು, ಬೇರೆಯವರ ಮಾತಿಗೆ ನಾನು ರಿಯಾಕ್ಟ್ ಮಾಡುವುದಿಲ್ಲ‌. ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ. ನನ್ನ ನಿಲುವನ್ನು ಆಗಾಗ್ಗೆ ವ್ಯಕ್ತಪಡಿಸುತ್ತೇನೆ. ಲೋಪಗಳ ಬಗ್ಗೆ ಗಟ್ಟಿಯಾಗಿ ಧ್ವನಿ ಏತ್ತುತ್ತಿದ್ದೇನೆ‌. ನಾನು ಐದು ಬಾರಿ ಗೆಲುವು ಸಾಧಿಸಿದ್ದೇನೆ ಎಂದು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. 

ರೇಣುಕಾಚಾರ್ಯ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾನೆ. ಬೆಂಗಳೂರಿನಲ್ಲಿ ಐಷಾರಾಮಿ ಮನೆ ಸಿಕ್ಕಿದೆ. ಆತನ ಕ್ಷೇತ್ರಕ್ಕೆ ಸರ್ಕಾರದಿಂದ ಸಾವಿರಾರು ಕೋಟಿ ರೂ. ಸಿಕ್ಕಿದೆ ಎಂದರೆ ಅಲ್ಲಿ ನನ್ನ ಶ್ರಮವಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com