
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ. ಅವರು ತೆಗೆದುಕೊಂಡು ಹೋಗಿದ್ದು ಏನು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿಎಂ ನಿನ್ನೆ ದೆಹಲಿಗೆ ಹೋಗುವಾಗ ಹೈ ಕಮಾಂಡ್ಗೆ ಕೊಡೋಕೆ ಆರು ಬ್ಯಾಗ್ ಗಳನ್ನು ಜೊತೆಯಲ್ಲಿ ತೆಗೆದು ಕೊಂಡು ಹೋಗಿದ್ದಾರೆ . ಉಡುಗೊರೆ ಕೊಂಡು ಹೋಗಿದ್ದಾರಾ ಅಥವಾ ಬೇರೆ ಏನು ತಗೊಂಡು ಹೋಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದು ಎಚ್ಡಿಕೆ ಕೇಳಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿರುವ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ. ಪ್ರಧಾನಿಗಳನ್ನು ಭೇಟಿ ಮಾಡೋಕೆ ಸಿಎಂ ಒಬ್ಬರೇ ಹೋಗಿದ್ರಾ.. ? ಅಥವಾ ಬ್ಯಾಗ್ ಗಳನ್ನು ತಗೊಂಡು ಹೋಗಿ ಭೇಟಿ ಮಾಡಿದ್ರಾ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಕನ್ನಡಿಗರಿಂದ ಆಡಳಿತ ನಡೆಯಬೇಕೇ ಹೊರತು, ದೆಹಲಿ ಬಿಜೆಪಿ ಹೈಕಮಾಂಡ್ನಿಂದ ಅಲ್ಲ. ನಿನ್ನೆ ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಸ್ಪೆಷಲ್ ಫ್ಲೈಟ್ ನಲ್ಲಿ ಹೋಗುವಾಗ ಆರು ಬ್ಯಾಗ್ ಗಳನ್ನು ತಗೊಂಡು ಹೋಗಿದ್ದಾರೆ. ಆ ಬ್ಯಾಗ್ ಗಳಲ್ಲಿ ಕರ್ನಾಟಕದ ವಿಷಯಗಳ ಬಗ್ಗೆ ತುಂಬಿದ್ರಾ..? ಅಥವಾ ಬೇರೆ ಏನಾದರೂ ತುಂಬಿಕೊಂಡು ಹೋದ್ರಾ ಎಂಬುದನ್ನು ಹೇಳಬೇಕು ಎಂದಿದ್ದಾರೆ.
Advertisement