ಬಿಎಸ್ ಯಡಿಯೂರಪ್ಪ ರಾಜಿನಾಮೆ ಕುರಿತ ಚರ್ಚೆ ಮಧ್ಯೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇನ್ನೂ ಪ್ರವಾಸದಲ್ಲಿ!

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿರದಿರುವುದು ತಿಳಿದು ಬಂದಿದೆ.
ಥಾವರ್ ಚಂದ್ ಗೆಹ್ಲೋಟ್
ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿರದಿರುವುದು ತಿಳಿದು ಬಂದಿದೆ. ವಜೂಬಾಯಿ ವಾಲಾ ಅವರ ನಂತರ 15 ದಿನಗಳ ಹಿಂದೆ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಿದರು. 

ಸೋಮವಾರ ದೆಹಲಿಗೆ ತೆರಳಿರುವ ಗೆಹ್ಲೋಟ್ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಶಿಷ್ಟಾಚಾರದ ಪ್ರಕಾರ ಭೇಟಿಯಾಗಲು ಹೊರಟಿದ್ದಾರೆ. ಇದರ ಜೊತೆಗೆ ದೆಹಲಿಯ ಹಲವು ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ, ತಮ್ಮ ತವರೂರು ಭೂಪಾಲ್ ಗೆ ತೆರಳಿ ಕೆಲ ದಿನಗಳ ಕಾಲ ಅಲ್ಲಿದ್ದು ವಾಪಸಾಗಲಿದ್ದಾರೆ.

ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 26 ರಂದು ನಡೆಯುವ ಸಮಾರಂಭದಲ್ಲಿ ಪಾಲ್ಗೋಳ್ಳಲು ಆಗಮಿಸುವ ನಿರೀಕ್ಷೆಯಿದೆ. ಒಂದು ವೇಳೆ ಯಡಿಯೂರಪ್ಪ ಅವರು ತಮ್ಮ ಹುದ್ದೆಯಿಂದ ಕೆಳಗಿಳಿದರೇ ತಮ್ಮ ರಾಜಿನಾಮೆಯನ್ನು ರಾಜ್ಯಪಾಲರಿಗೆ ನೀಡಬೇಕಾಗುತ್ತದೆ. ಹೀಗಾಗಿ ಸೋಮವಾರಕ್ಕಿಂತ ಮೊದಲೇ ರಾಜ್ಯಪಾಲರು ಬೆಂಗಳೂರಿಗೆ ವಾಪಸಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com