ಪಕ್ಷದಲ್ಲಿ  ಒಳಜಗಳವಿಲ್ಲ: ಯಡಿಯೂರಪ್ಪ ಸರ್ಕಾರ ಎಲ್ಲಾ ರೀತಿಯಿಂದಲೂ ವಿಫಲ; ಸಂದರ್ಶನದಲ್ಲಿ ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಅವರ ಬೆಂಬಲಿಗರು ಬಹಿರಂಗವಾಗಿ ಹೇಳಿಕೆ ನೀಡಿದ ನಂತರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರನ್ನು ಕೆರಳಿದರು ಇದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಬೆಳಕಿಗೆ ಬಂದಿತ್ತು.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ದೊಡ್ಡ ಮುಜುಗರವನ್ನು ಎದುರಿಸಬೇಕಾಯಿತು. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಅವರ ಬೆಂಬಲಿಗರು ಬಹಿರಂಗವಾಗಿ ಹೇಳಿಕೆ ನೀಡಿದ ನಂತರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರನ್ನು ಕೆರಳಿದರು ಇದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಬೆಳಕಿಗೆ ಬಂದಿತ್ತು.

ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಹೇಳಿಕೆ ಶಿವಕುಮಾರ್ ಬೆಂಬಲಿಗರಿಗೆ ಕಿರಿಕಿರಿ ಉಂಟು ಮಾಡಿತ್ತು. ಆದರೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದೊಳಗೆ ಯಾವುದೇ ಭಿನ್ನಾಬಿಪ್ರಾಯವಿಲ್ಲ, ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟಿರುವುದಾಗಿ ಹೇಳಿದ್ದಾರೆ.

ಪ್ರ: ನೀವು ಮತ್ತು ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ಮಾಡಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಿದ್ದೀರಿ?
ಪೆಗಾಸಸ್ ಸ್ಪೈವೇರ್ ಬಳಸಿ ಕಾನೂನುಬಾಹಿರ ಕಣ್ಗಾವಲು, ಬಿಜೆಪಿಯೊಳಗಿನ ರಾಜಕೀಯ ಬೆಳವಣಿಗೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದೆವು, ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮುಂದಿನ ನಮ್ಮ ಕ್ರಿಯಾ ಯೋಜನೆ ಬಗ್ಗೆ ಚರ್ಚಿಸಲಾಯಿತು.

ಪ್ರ: ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ನಿಮ್ಮ ಮತ್ತು ಸಿದ್ದರಾಮಯ್ಯ ನಡುವಿನ ಜಗಳ ಎಲ್ಲಿಗೆ ಬಂತು?

ಪಕ್ಷದೊಳಗೆ ಯಾವುದೇ ಭಿನ್ನಾಬಿಪ್ರಾಯವಿಲ್ಲ,  ನಾವು ಯಾರನ್ನೂ ಸಿಎಂ ಅಭ್ಯರ್ಥಿ ಎಂದು ಬಿಂಬಿಸಿಲ್ಲ,  ನಮಗೆ ಬೇಕಾಗಿರುವುದನ್ನು ಯಾರೋ ಒಬ್ಬ ವ್ಯಕ್ತಿಯಿಂದ ಮಾಡಲು ಸಾಧ್ಯವಿಲ್ಲ, ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟವನು ನಾನು, ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ, ಕೆಲವರು ಅದನ್ನು ಸಮಸ್ಯೆಯನ್ನಾಗಿಸಲು ಪ್ರಯತ್ನಿಸಿದರು.

ಪ್ರ: ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಜೊತೆ ಯಾವ ವಿಷಯಗಳ ಬಗ್ಗೆ ಚರ್ಚಿಸಿದಿರಿ?

ನಾವು ಯಾವುದೇ ವಿಷಯಗಳ ಬಗ್ಗೆ ಚರ್ಚಿಸಿಲ್ಲ, ಪಕ್ಷದೊಳಗೆ ಶಿಸ್ತು ಪ್ರಮುಖವಾಗಿದೆ. ನಾವು ದೆಹಲಿಗೆ ಭೇಟಿ ನೀಡಡುವ ಮೊದಲೇ ಈ ವಿಷಯಗಳ ಬಗ್ಗೆ ಚರ್ಚಿಸದಂತೆ ಕೇಂದ್ರ ನಾಯಕರು ನಮಗೆ ವಾರ್ನಿಂಗ್ ನೀಡಿದ್ದರು.

ಪ್ರ: ಬಿಜೆಪಿಯೊಳಗಿನ ಒಳಜಗಳದ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಬಿಜೆಪಿ ಎಲ್ಲಾ ರೀತಿಯಿಂದಲೂ ವಿಫಲವಾಗಿದೆ, ಹೀಗಾಗಿ ರಾಜ್ಯದಲ್ಲಿ ಹೊಸ ಸಿಎಂ ತರಲು ಪ್ರಯತ್ನ ನಡೆಯುತ್ತಿದೆ,  ಇಲ್ಲದಿದ್ದರೆ ಹೊಸ ಸಿಎಂ ತರುವ ಯತ್ನ ಏಕೆ ನಡೆಯುತ್ತಿತ್ತು? ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸುವಾಗ 75 ವರ್ಷ ತುಂಬಿತ್ತು. ಅವರೂ ಎಲ್ಲಾ ರೀತಿಯಿಂದಲೂ  ವಿಫಲರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ.

ಪ್ರ: ಯಡಿಯೂರಪ್ಪ ಅವರನ್ನು ಲಿಂಗಾಯತ ಸ್ವಾಮೀಜಿಗಳು ಬೆಂಬಲಿಸುತ್ತಿದ್ದಾರಲ್ಲ?
ಇದು ಅವರ ವಯಕ್ತಿಯ ಆಶಯ, ಪಕ್ಷದ ಅಭಿಪ್ರಾಯವಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com