ನಿಮ್ಮ ʼರಾಜಕೀಯ ನಿವೃತ್ತಿʼ ಪ್ರಹಸನಕ್ಕೆ ಕೊನೆಯೆಂದು: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

ಬಿ.ಎಸ್.ಯಡಿಯೂರಪ್ಪ ಅವರ ಪದತ್ಯಾಗ ಕುರಿತು ಪ್ರಶ್ನೆ ಎತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಮಂಗಳವಾರ ತಿರುಗೇಟು ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಪದತ್ಯಾಗ ಕುರಿತು ಪ್ರಶ್ನೆ ಎತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಮಂಗಳವಾರ ತಿರುಗೇಟು ನೀಡಿದೆ. 

ಮುಖ್ಯಮಂತ್ರಿ ಸ್ಥಾನದಲ್ಲಿದ್ದ ವೀರೇಂದ್ರ ಪಾಟೀಲ ಅವರನ್ನು ಅನಾರೋಗ್ಯದಲ್ಲಿರುವಾಗಲೇ, ವಿಮಾನ ನಿಲ್ದಾಣದಲ್ಲಿ ರಾಜೀವ್‌ ಗಾಂಧಿ "ಮುಖ್ಯಮಂತ್ರಿ ಪದವಿಯಿಂದ ಕಿತ್ತೆಸೆದದ್ದನ್ನು" ರಾಜ್ಯದ ಜನತೆ ಮರೆತಿಲ್ಲ. ಅಂದ ಹಾಗೆ ನಿಮ್ಮ ʼರಾಜಕೀಯ ನಿವೃತ್ತಿʼ ಪ್ರಹಸನಕ್ಕೆ ಕೊನೆಯೆಂದು ಎಂದು ಪ್ರಶ್ನಿಸಿದೆ. 

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಚುನಾವಣೆಯಲ್ಲಿ ಸೋತಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುವುದು ಪ್ರಜಾಪ್ರಭುತ್ವದ ರೂಢಿ. ಆದರೆ, ಶಾಸನ ಸಭೆಯಲ್ಲಿ ಬಹುಮತ ಹೊಂದಿದ್ದ ಪಕ್ಷದ ಮುಖ್ಯಮಂತ್ರಿ ರಾಜೀನಾಮೆ ನೀಡಿದಾಗ, ಅದಕ್ಕೆ ಕಾರಣವನ್ನು ನೀಡಬೇಕಾಗುತ್ತದೆ. ಯಡಿಯೂರಪ್ಪ ಅವರ ರಾಜೀನಾಮೆಗೆ ಕಾರಣ ಅವರ ವಯಸ್ಸೇ ಇಲ್ಲವೇ ಅವರ ಸರ್ಕಾರದ ಭ್ರಷ್ಟಾಚಾರವೇ ಎಂದು ಕೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com