ಜೆಡಿಎಸ್ ಬಲಿಷ್ಠ ಪಕ್ಷ: ಸಿಎಂ ಬದಲಾವಣೆ ಬೆನ್ನಲ್ಲೇ ದಿ. ಅನಂತ್ ಕುಮಾರ್ ಪುತ್ರಿಯ ಟ್ವೀಟ್ ವೈರಲ್!

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಪುತ್ರಿ ವಿಜೇತ ಜೆಡಿಎಸ್ ಹೊಗಳಿ ಮಾಡಿರುವ ಟ್ವೀಟ್ ಇದೀಗ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ.
ವಿಜೇತ ಅನಂತ ಕುಮಾರ್
ವಿಜೇತ ಅನಂತ ಕುಮಾರ್
Updated on

ಬೆಂಗಳೂರು: ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಪುತ್ರಿ ವಿಜೇತ ಜೆಡಿಎಸ್ ಹೊಗಳಿ ಮಾಡಿರುವ ಟ್ವೀಟ್ ಇದೀಗ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ವಿಜೇತ ಅವರು ಜೆಡಿಎಸ್ ಕುರಿತು ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ರಾಜಕೀಯ ಏಕೆ ಕುತೂಹಲಕರವಾಗಿದೆ ಗೊತ್ತಾ? ಏಕೆಂದರೆ ಜೆಡಿಎಸ್ ಇನ್ನು ಬಲಿಷ್ಠ ರಾಜಕೀಯ ಪಕ್ಷವಾಗಿ ಉಳಿದಿದೆ ಎಂದು ಟ್ವೀಟ್ ಮಾಡಿದ್ದಾರೆ. 

ವಿಜೇತ ಯಾವ ಕಾರಣಕ್ಕೆ ಈ ರೀತಿ ಟ್ವೀಟ್ ಮಾಡಿದ್ದಾರೆ ಗೊತ್ತಿಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಅವರಿಗೆ ಟಿಕೆಟ್ ನೀಡದೆ ಯುವ ನಾಯಕ ತೇಜಸ್ವಿ ಸೂರ್ಯಾಗೆ ಟಿಕೆಟ್ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com