ಅಧಿಕೃತವಾಗಿ ಕಾಂಗ್ರೆಸ್'ಗೆ ಮಧು ಬಂಗಾರಪ್ಪ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಎಚ್.ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಧುಬಂಗಾರಪ್ಪ ಅವರಿದೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ಕಾಂಗ್ರೆಸ್ ನಾಯಕರು
ಮಧುಬಂಗಾರಪ್ಪ ಅವರಿದೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ಕಾಂಗ್ರೆಸ್ ನಾಯಕರು
Updated on: 

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ ಎಚ್.ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು, ಇಂದು ಅಧಿಕೃತವಾಗಿ ಕಾಂಗ್ರೆಸ್'ಗೆ ಸೇರ್ಪಡೆಗೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ ಸೇರ್ಪಡೆಯಾದರು. ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ನಾಯಕರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಳೆದ ಮಾರ್ಚ್‌ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದರು. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿ ಈ ಕುರಿತು ಚರ್ಚೆ ನಡೆಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಆದರೆ ಕೋವಿಡ್ ಪರಿಸ್ಥಿತಿಯ ಕಾರಣದಿಂದಾಗಿ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿರಲಿಲ್ಲ. ಇದೀಗ ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಶುಕ್ರವಾರ ಪಕ್ಷಕ್ಕೆ ಸೇರ್ಪಡೆಗೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com