ಸಿಎಂ ಬಸವರಾಜ ಬೊಮ್ಮಾಯಿ ಏಕ ಚಕ್ರಾದಿಪತ್ಯ! ಉಪಮುಖ್ಯಮಂತ್ರಿ ನೇಮಕ ಸಂಸ್ಕೃತಿಗೆ ತಿಲಾಂಜಲಿ?

ಬಸವರಾಜ ಬೊಮ್ಮಾಯಿ ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳುವರೆ ಎಂಬ ಚರ್ಚೆ ಆರಂಭವಾಗಿದೆ. ಹಲವು ನಾಯಕರು ಡಿಸಿಎಂ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಯಾವುದೇ ಡಿಸಿಎಂ ನೇಮಕ ಮಾಡುವುದಿಲ್ಲ ಎಂದು ಹೇಳಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾದ  ನಂತರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. 

ಬಸವರಾಜ ಬೊಮ್ಮಾಯಿ ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳುವರೆ ಎಂಬ ಚರ್ಚೆ ಆರಂಭವಾಗಿದೆ. ಹಲವು ನಾಯಕರು ಡಿಸಿಎಂ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಯಾವುದೇ ಡಿಸಿಎಂ ನೇಮಕ ಮಾಡುವುದಿಲ್ಲ ಎಂದು ಹೇಳಿದೆ,  ಇದರ ಜೊತೆಗೆ ಬೊಮ್ಮಾಯಿ ಅವರು ಕೂಡ ಡಿಸಿಎಂ ಗಳ ನೇಮಕ ಮಾಡುವ ಸಂಸ್ಕೃತಿಗೆ ತಿಲಾಂಜಲಿ ಇಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಎಸ್ ಯಡಿಯೂರಪ್ಪನವರ ಅವಧಿಯಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸಲಾಗಿತ್ತು. ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕತ್ವವನ್ನು ಅಭಿವೃದ್ಧಿಪಡಿಸುವುದು ಇದರ ಹಿಂದಿನ ಉದ್ದೇಶವಾಗಿತ್ತು. ಯಡಿಯೂರಪ್ಪ ಅವರು ಹೊರಡುವ ಸಮಯ ಬಂದಾಗ ಡಿಸಿಎಂ ಸ್ಥಾನದಲ್ಲಿ ಇರುವವರು ಸಿಎಂ ಹುದ್ದೆಗೆ ಬರುತ್ತಾರೆ ಎಂಬ ಆಲೋಚನೆ ಇತ್ತು, ಆದರೆ ಅದು ಆಗಲಿಲ್ಲ ಎಲ್ಲಾ ಲೆಕ್ಕಾಚಾರ ತಲೆಕೆಳಗಾಯಿತು.

ಈ ಸಮಯದಲ್ಲಿ, ಅಂತಹ ಪರ್ಯಾಯ ನಾಯಕತ್ವದ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಜೊತೆ ನಿಕಟ ಸಂಪರ್ಕ ಹೊಂದಿರುವ ಪಕ್ಷದ ಹಿರಿಯ ನಾಯಕರೊಬ್ಬರು ಸಲಹೆ ನೀಡಿದರು. ಪ್ರಾದೇಶಿಕ, ಜಾತಿ ಮತ್ತು ಸಮುದಾಯದ ಸಮತೋಲನ ಸಾಧಿಸುವ ಉದ್ದೇಶದಿಂದ ಹಲವು ಸಮುದಾಯದ ನಾಯಕರನ್ನು ಡಿಸಿಎಂ ಮಾಡಲಾಗಿತ್ತು.

2019 ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ಯಾವುದೇ ಡಿಸಿಎಮ್‌ಗಳನ್ನು ಹೊಂದುವ ಆಲೋಚನೆಯನ್ನು ವಿರೋಧಿಸಿದರು. ಡಾ ಸಿ ಎನ್ ಅಶ್ವತ್ಥ ನಾರಾಯಣ್ ಒಕ್ಕಲಿಗ ಮತ್ತು ಲಕ್ಷ್ಮಣ ಸವದಿ- ಲಿಂಗಾಯತ ಅವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದರು. ನಂತರ ಸಿಎಂ ಯಡಿಯೂರಪ್ಪ ತಮ್ಮ ಪರಮಾಪ್ತ ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡುವಂತೆ ಬಿಜೆಪಿ ಹೈಕಮಾಂಡ್ ಬಳಿ ಪಟ್ಟು ಹಿಡಿದು ನೇಮಕ ಮಾಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com