ನಾಯಕತ್ವ ಬದಲಾವಣೆ ಚರ್ಚೆ: ಅಚ್ಚರಿ ಮೂಡಿಸಿದ ಸಿಎಂ ಪುತ್ರ ವಿಜಯೇಂದ್ರ ದೆಹಲಿ ಭೇಟಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ್ದಾರೆ.
ವಿಜಯೇಂದ್ರ
ವಿಜಯೇಂದ್ರ
Updated on: 

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ್ದಾರೆ. 

ಬೆಂಗಳೂರಿನಿಂದ ಬೆಳಿಗ್ಗೆ 5.30ಕ್ಕೆ ತಮ್ಮ ಕೆಲವು ಬೆಂಬಲಿಗರೊಂದಿಗೆ ವಿಮಾನದಲ್ಲಿ ಹೊರಟ ವಿಜಯೇಂದ್ರ ಅವರು 8 ಗಂಟೆಗೆ ದೆಹಲಿ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿಗೆ ಸಚಿವ ಸಿ.ಪಿ ಯೋಗೇಶ್ವರ್ ದೆಹಲಿಗೆ ಭೇಟಿ ನೀಡಿ ಬಂದ ನಂತರ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಗುಟ್ಟಾಗಿ ಉಳಿದಿಲ್ಲ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುವ ಸಾಧ್ಯತೆ ಇದೆ ಎಂಬ ಮಾತುಗಳು ಇತ್ತೀಚೆಗಷ್ಟೇ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ, ವಿಜಯೇಂದ್ರ ಅವರ ಈ ದಿಢೀರ್‌ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com