ಸಚಿವ ಸಿ.ಪಿ.ಯೋಗೇಶ್ವರ್ ಪವರ್ ಬೆಗ್ಗರ್ ಎಂದ ಡಿಕೆಶಿ!

ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಸರ್ಕಾರದ ಜೊತೆ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಪಿ.ಯೋಗೇಶ್ವರ್‌‌ರನ್ನು ಪವರ್ ಬೆಗ್ಗರ್(ಅಧಿಕಾರದ ಭಿಕ್ಷುಕ) ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆದಿದ್ದಾರೆ.
ಡಿಕೆ ಶಿವಕುಮಾರ್, ಸಿ. ಪಿ.ಯೋಗೇಶ್ವರ್
ಡಿಕೆ ಶಿವಕುಮಾರ್, ಸಿ. ಪಿ.ಯೋಗೇಶ್ವರ್
Updated on

ಬೆಂಗಳೂರು: ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಸರ್ಕಾರದ ಜೊತೆ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಪಿ.ಯೋಗೇಶ್ವರ್‌‌ರನ್ನು ಪವರ್ ಬೆಗ್ಗರ್(ಅಧಿಕಾರದ ಭಿಕ್ಷುಕ) ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕರೆದಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಎರಡು-ಮೂರು ಪಕ್ಷ ಸುತ್ತಿದವರನ್ನು ಯಡಿಯೂರಪ್ಪ, ತಮ್ಮ‌ ಮನೆಗೆ ಕರೆದುಕೊಂಡು ಹೋದರು. ಈಗ ಅನುಭವಿಸಲಿ ಬಿಡಿ. ಸಚಿವ ಸಿ.ಪಿ.ಯೋಗೇಶ್ವರ್ ಒಬ್ಬ ಪವರ್ ಬೆಗ್ಗರ್ ಆಗಿದ್ದು, ಅಂತವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ಹಿಂದೆ ಯಡಿಯೂರಪ್ಪ ಪಕ್ಷ ಬಿಟ್ಟು, ಪಕ್ಷ ಕಟ್ಟಿ ಏನೆಲ್ಲ ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ.ಈಗ ಎರಡು-ಮೂರು ಪಕ್ಷ ಬಿಟ್ಟವರನ್ನು ತಮ್ಮ ಹಿಂದೆ ಕರೆದುಕೊಂಡು ಹೋದರು. ಹಿಂದೆ ನಾವು ಕೂಡ ಇದೇ ತಪ್ಪು ಮಾಡಿದ್ದೆವು. ಅದಕ್ಕೆ ಪ್ರತಿಫಲ ಅನುಭವಿಸಿದ್ದೇವೆ. ಈಗ ಯಡಿಯೂರಪ್ಪನವರ ಸರದಿ.  ಹೀಗೆ ತಪ್ಪು ಮಾಡಿದವರೆಲ್ಲ ಅನುಭವಿಸಲೇಬೇಕು ಎಂದು ಮಾರ್ಮಿಕವಾಗಿ ಹೇಳಿದರು.

'ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ. ಕೋರೊನಾ ಸಮಯದಲ್ಲಿ ಜನರ ಜೀವ ಉಳಿಸುವುದು ನಮ್ಮ ಕರ್ತವ್ಯ.ಆದರೆ ಬಿಜೆಪಿಯಲ್ಲಿ ಇರುವವರೆಲ್ಲಾ ಪವರ್ ಬೆಗ್ಗರ್ ಗಳು. ಪವರ್ ಬೆಗ್ಗರ್ ದೆಹಲಿಗಾದರೂ ಹೋಗಲಿ, ಅಂಡಮಾನ್‌ಗಾದರೂ ಹೋಗಲಿ. ಆದರೆ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷವನ್ನು ಸಹ ಉಲ್ಲೇಖಿಸಿ ಇದು ಎರಡು, ಮೂರು ಪಕ್ಷಗಳ ಸರ್ಕಾರ ಎಂದು ಮಾತನಾಡಿದ್ದಾರಡ.ಹೀಗೆ ಮಾತನಾಡಲು ಅವರಿಗೆ ಶಕ್ತಿ ಕೊಟ್ಟಿದ್ದು ಇದೇ ಯಡಿಯೂರಪ್ಪನವರೇ ತಾನೇ..?! ರಾಜಕಾರಣದಲ್ಲಿ ನಾವು ಮಾಡಿದ್ದನ್ನು ನಾವೇ ಅನುಭವಿಸಬೇಕು ಎಂದು ಡಿಕೆಶಿ ಕುಟುಕಿದರು.

ಈಗ ನಾವು ಬಡವರ ನೋವು, ಸಮಸ್ಯೆಗೆ ಸ್ಪಂದಿಸಿ, ಅವರ ಧ್ವನಿಯಾಗಿ ಕೆಲಸ ಮಾಡಿ ಅವರ ಜೀವ ಉಳಿಸಬೇಕು. ಇದಕ್ಕೆ ಕಾಂಗ್ರೆಸ್ ಆದ್ಯತೆ ನೀಡುತ್ತಿದೆಯೇ ಹೊರತು ಬೇರೆ ವಿಚಾರಗಳು ಆದ್ಯತೆಯಲ್ಲ ಎಂದು ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com