ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ವಿವಾದ ಸೃಷ್ಟಿಯಾಗುತ್ತದೆ: ಸಿ.ಪಿ. ಯೋಗೇಶ್ವರ್
ರಾಮನಗರ: ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಹಿಂದೆಯೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ, ನಾನು ಸಿಎಂ ಯಡಿಯೂರಪ್ಪನವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಇಂದು ಬೆಳಗ್ಗೆ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ, ನಾನು ರಾಜಕೀಯವಾಗಿ ಮಾತನಾಡುವುದಿಲ್ಲ, ಸಿಎಂ ಬಗ್ಗೆ ಮಾತಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದರು.
ಇಂದು ಮುಖ್ಯಮಂತ್ರಿ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಕೇಳುತ್ತಿದ್ದೇನೆ, ನನಗೆ ಆ ಬಗ್ಗೆ ಸ್ಪಷ್ಟತೆ ಇಲ್ಲ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ, ಕೋವಿಡ್-19 ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದರು.
ನಮ್ಮದು ರಾಷ್ಟ್ರೀಯ ಪಕ್ಷ, ಹೀಗಾಗಿ ವರಿಷ್ಠರು ಎಲ್ಲವನ್ನೂ ತೀರ್ಮಾನಿಸುತ್ತಾರೆ. ಯಾರು ಬೇಕು, ಬೇಡವೆಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ