ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ 

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಬಿ ಎಸ್ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (ಸಂಗ್ರಹ ಚಿತ್ರ)
ಬಿ ಎಸ್ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಮುಖ್ಯಮಂತ್ರಿ ಹುದ್ದೆ ಬದಲಾವಣೆ, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆ ಎಂದು ಪದೇ ಪದೇ ಕೇಳಿಬರುತ್ತಿರುವ ಮಾತುಗಳು, ಊಹಾಪೋಹಗಳಿಗೆ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್-19 ಸಂಕಷ್ಟದ ಸಮಯದಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ, ಕೋವಿಡ್ ಸಮಸ್ಯೆಗಳನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ, ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ, ಹೀಗಾಗಿ ಮುಖ್ಯಮಂತ್ರಿಯ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

ಇನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಕೂಡ ತೆಗೆಯುವುದಿಲ್ಲ, ಇವೆಲ್ಲಾ ಸುದ್ದಿಗಳು ಕೇವಲ ಕಾಲ್ಪನಿಕ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com