ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ಧಾಲಿಕೆ ಆರೋಪ

ಶಾಸಕ ಅರವಿಂದ್​ ಬೆಲ್ಲದ್​ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.
ಶಾಸಕ ಅರವಿಂದ್ ಬೆಲ್ಲದ್
ಶಾಸಕ ಅರವಿಂದ್ ಬೆಲ್ಲದ್
Updated on

ಬೆಂಗಳೂರು: ಶಾಸಕ ಅರವಿಂದ್​ ಬೆಲ್ಲದ್​ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

ಕುಮಾರ ಕೃಪಾ ಗೆಸ್ಟ್​ಹೌಸ್​ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಕಳೆದ ಒಂದು ತಿಂಗಳಿನಿಂದ ನನ್ನ ಫೋನ್​ ಟ್ಯಾಪ್ ಆಗುತ್ತಿದೆ. ನನಗೆ ಅಪರಿಚಿತ ಸಂಖ್ಯೆಯಿಂದ ಕರೆಯೊಂದು ಬಂದಿತ್ತು. ಯಾರೆಂದು ಕೇಳಿದಾಗ ಯುವರಾಜ ಸ್ವಾಮಿ ಎಂದು ಹೇಳಿಕೊಂಡರು. ನನಗೇಕೋ ಈ ಕರೆ ಸರಿ ಎನಿಸದ ಕಾರಣ ನಾನು ಕರೆಯನ್ನ ಕಟ್​ ಮಾಡಿದೆ.

ಆದರೆ ಈ ಘಟನೆ ನಡೆದು ಮೂರ್ನಾಲ್ಕು ದಿನಗಳ ಬಳಿಕ ನನ್ನ ಮೊಬೈಲ್ ​ಗೆ ಮತ್ತೊಮ್ಮೆ ಕರೆ ಬಂದಿತ್ತು. ಆಗಲೂ ಸಹ ತಾನು ಯುವರಾಜ ಸ್ವಾಮಿ ಎಂದು ಹೇಳಿಕೊಂಡ ವ್ಯಕ್ತಿ, ನನ್ನನ್ನ ಅನವಶ್ಯಕವಾಗಿ ಜೈಲಿಗೆ ಹಾಕಿದ್ದಾರೆ. ನನಗೆ ಸಹಾಯ ಮಾಡಿ ಎಂದಿದ್ದರು.

ಆದರೆ ಈ  ಕರೆಯ ಹಿಂದೆ ನನ್ನ ವಿರುದ್ಧ ದೊಡ್ಡ ಪಿತೂರಿಯೇ ಇದೆ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದೇನೆ. ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇನೆ ಎಂದು ಶಾಸಕ ಅರವಿಂದ್ ಬೆಲ್ಲದ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com