ಬೆಳಗಾವಿ: ಸತೀಶ್ ಜಾರಕಿಹೊಳಿ ಮಕ್ಕಳು ಪ್ರಿಯಾಂಕಾ, ರಾಹುಲ್ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ!

ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಮಕ್ಕಳಾದ ಪ್ರಿಯಾಂಕಾ ಮತ್ತು ರಾಹುಲ್ ರಾಜ್ಯ ರಾಜಕೀಯಕ್ಕೆ ಪ್ರವೇಶ ಪಡೆದಿದ್ದಾರೆ.
ರಾಹುಲ್ ಮತ್ತು ಪ್ರಿಯಾಂಕಾ ಜೊರಕಿಹೊಳಿ
ರಾಹುಲ್ ಮತ್ತು ಪ್ರಿಯಾಂಕಾ ಜೊರಕಿಹೊಳಿ
Updated on

ಬೆಳಗಾವಿ: ಪ್ರಿಯಾಂಕಾ ಮತ್ತು ರಾಹುಲ್ ಕರ್ನಾಟಕ ರಾಜಕೀಯಕ್ಕೆ ಎಂಟ್ರಿ ಪಡೆದಿದ್ದಾರೆ. ಗೊಂದಲಕ್ಕೊಳಗಾಗಬೇಡಿ ಇವರು ಗಾಂಧಿ ಕುಟುಂಬಸ್ಥರಲ್ಲ, ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಮಕ್ಕಳಾದ ಪ್ರಿಯಾಂಕಾ ಮತ್ತು ರಾಹುಲ್ ರಾಜ್ಯ ರಾಜಕೀಯಕ್ಕೆ ಪ್ರವೇಶ ಪಡೆದಿದ್ದಾರೆ.

ಕಾಂಗ್ರೆಸ್ ನಾಯಕರಾಗಿ ಇಬ್ಬರು ಬರುತ್ತಿಲ್ಲ, ಬದಲಾಗಿ ಪಕ್ಷದ ತಳಮಟ್ಟದ ಕಾರ್ಯಕರ್ತರಾಗಿ ಕೆಲಸ ಮಾಡಲಿದ್ದಾರೆ. ಇಬ್ಬರು ರಾಜಕೀಯವಾಗಿ ಪ್ರಾಬಲ್ಯವಾಗಿರುವ ಕುಟುಂಬದವರು, ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಇಬ್ಬರನ್ನು ಕಾರ್ಯಕರ್ತರನ್ನಾಗಿ ಪರಿಚಯಿಸಲಾಯಿತು.

ಪ್ರಿಯಾಂಕಾ (24) ಎಂಬಿಎ ಪದವೀಧರೆ, ಕಳೆದ 2 ವರ್ಷಗಳಿಂದ ತಮ್ಮ ತಂದೆಯ ಜೊತೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಏರೋನಾಟಿಕಲ್ ಇಂಜಿನೀಯರಿಂಗ್ ಪದವಿ ಅಂತಿಮ ವರ್ಷದಲ್ಲಿರುವ ರಾಹುಲ್, ಜನರ ಸಮಸ್ಯೆಗಳನ್ನು ಅಧ್ಯಯನ ಮಾಡಲು ಮುಂದಾಗಿದ್ದಾರೆ. ರಾಹುಲ್ ಕಳೆದ 2 ವರ್ಷಗಳಿಂದ ತಮ್ಮ ತಂದೆಯ ಜೊತೆ ಸಂಚರಿಸಿ ಹಲವು ರಾಜಕೀಯ ಮತ್ತು ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ, ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಬಯಸುತ್ತಿದ್ದು, ಗ್ರಾಮೀಣ ಪ್ರತಿಭೆಗಳನ್ನು ಮುಂದೆ ತರಲು ಯತ್ನಿಸುತ್ತಿದ್ದಾರೆ.

ರಾಜಕೀಯದಲ್ಲಿ ತೊಡಗಿಸಿಕೊಳ್ಳುವವರು ಮೊದಲು ಸಮಾಜ, ಸೇವೆ ಹಾಗೂ ಪಕ್ಷ ಎಂದರೇನು ಎನ್ನುವುದನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಸತೀಶ್ ಜಾರಕಿಹೊಳಿ ಹೇಳಿದರು, ಪುತ್ರ ರಾಹುಲ್‌ ಹಾಗೂ ಪ್ರಿಯಾಂಕಾ ಅಧಿಕೃತವಾಗಿ ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪಕ್ಷ ಸಂಘಟನೆ ಮೂಲಕ ಅವರು ಸಾಮರ್ಥ್ಯ ಪ್ರದರ್ಶಿಸಬೇಕು’ ಎಂದು ಹೇಳಿದರು. ‘ಇಬ್ಬರೂ ತಮಗೆ ಅವಕಾಶ ಇರುವಲ್ಲಿ ಹಾಗೂ ಎಲ್ಲಿ ಜನ ಬಯಸುತ್ತಾರೋ ಅಲ್ಲೆಲ್ಲಾ ಹೋಗಿ ಸೇವೆ ಮಾಡಬೇಕು. ಜೊತೆಗೆ ಪಕ್ಷವನ್ನೂ ಬಲಪಡಿಸಬೇಕು. ಹಿರಿಯರು–ಕಿರಿಯರೊಂದಿಗೆ ಬೆರೆತು ಅವರು ಕೊಡುವ ಸಲಹೆ–ಸೂಚನೆಗಳನ್ನು ಪಾಲಿಸಬೇಕು.

ತಮ್ಮ ವಿಚಾರಗಳನ್ನು ಅವರಿಗೆ ತಿಳಿಸಬೇಕು. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು. ‘ಇಬ್ಬರೂ ಮೂರು ತಿಂಗಳ ಹಿಂದೆಯೇ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ಇಬ್ಬರ ಮೇಲೂ ಸಾಕಷ್ಟು ಜವಾಬ್ದಾರಿ ಇದೆ. ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದರು. ‘ಪಕ್ಷ ಸಂಘಟನೆಗಾಗಿ ನಾನು ರಾಜ್ಯದಾದ್ಯಂತ ಸಂಚರಿಸಬೇಕಾಗುತ್ತದೆ. ಹೀಗಾಗಿ, ಪುತ್ರ ಮತ್ತು ಪುತ್ರಿ ಇನ್ಮುಂದೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗುತ್ತಾರೆ. ಕಾರ್ಯಕರ್ತರು ನನಗೆ ತೋರಿಸಿರುವ ಪ್ರೀತಿ, ಅಭಿಮಾನ, ಸಹಕಾರವನ್ನು ಅವರಿಗೂ ನೀಡಬೇಕು. ಅವರಿಂದ ಕೆಲಸ ಪಡೆಯಬೇಕು’ ಎಂದು ಕೋರಿದರು.

ರಾಹುಲ್ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಹಲವಾರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಾಯ ಮಾಡಿದ್ದಾರೆ. ಪ್ರಿಯಾಂಕಾಗೆ ತಮ್ಮ ತಂದೆಯೇ ರೋಲ್ ಮಾಡೆಲ್,  ಕಳೆದ 30 ವರ್ಷಗಳ ರಾಜಕೀಯದಲ್ಲಿ ತಮ್ಮ ತಂದೆ ಮಾಡಿರುವ ಹಲವು ಸೇವೆಗಳನ್ನು ಸ್ಮರಿಸಿದ್ದಾರೆ. ತಾವು ಕಲಿಯಬೇಕಾಗಿರುವುದು ಬಹಳಷ್ಟಿದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com