

ಬೆಂಗಳೂರು: ರಾಜ್ಯದ ಜನರಿಗೆ ಲಸಿಕೆ ನೀಡಲು ಸಾಧ್ಯವಾಗದಿದ್ದರೆ, ಅವೈಜ್ಞಾನಿಕ ಮಾಹಿತಿ ನೀಡುವುದನ್ನು ನಿಲ್ಲಿಸಿ ಎಂದು ಬಿಜೆಪಿಗೆ ಕಾಂಗ್ರೆಸ್ ಬುಧವಾರ ಹೇಳಿದೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿ ನಾಯಕರು ಲಸಿಕೆಯ ಕುರಿತಂತೆ ತಪ್ಪುಸಂದೇಶಗಳನ್ನು ಹರಡುತ್ತಿರುವ ಮಾಹಿತಿಗಳು ಬರುತ್ತಿವೆ. ಇಂತಹ ಅಪಾಯಕಾರಿ ನಡೆಯ ಮೂಲಕ ಲಸಿಕೆ ಪ್ರಕರಣದಲ್ಲಿ ಬಿಜೆಪಿ ವೈಫಲ್ಯವನ್ನು ಜನರು ಪ್ರಶ್ನಿಸದಂತೆ ಮಾಡಲಾಗುತ್ತಿದೆ. ಬಿಜೆಪಿಯಿಂದ ಲಸಿಕೆ ನೀಡಲು ಸಾಧ್ಯವಾಗದಿದ್ದರೆ ಅವೈಜ್ಞಾನಿಕ ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.