2023ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆದರೆ ಯಾವ ಕ್ಷೇತ್ರದಲ್ಲಿ ಎಂಬುದನ್ನು ನಿರ್ಧರಿಸಿಲ್ಲ: ಸಿದ್ದರಾಮಯ್ಯ

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಇನ್ನೂ ನಿರ್ಧರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಇನ್ನೂ ನಿರ್ಧರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಬಾದಾಮಿಯ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಮೈಸೂರು ಅಥವಾ ಬೆಂಗಳೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿದ್ದರಾಮಯ್ಯ ನಿಷ್ಠ ಶಾಸಕ ಜಮೀರ್ ಅಹಮದ್ ತಮ್ಮ ಕ್ಷೇತ್ರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಗೆ ಬಿಟ್ಟುಕೊಡಲು ಮುಂದಾಗಿದ್ದಾರೆ. 

ಸದ್ಯ ನಾನು ಬಾದಾಮಿ ಕ್ಷೇತ್ರದ ಶಾಸಕ. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದೇನೆ ಎಂದು ನಾನೂ ಎಲ್ಲಿಯೂ ಹೇಳಿಲ್ಲ. ಆದರೆ, ಇಲ್ಲಿಂದ (ಚಾಮರಾಜಪೇಟೆ) ಸ್ಪರ್ಧಿಸುವಂತೆ ಕ್ಷೇತ್ರದ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಹೇಳುತ್ತಿದ್ದಾರೆ’ ಎಂದರು. 

ಚಾಮರಾಜಪೇಟೆಯಿಂದ ಸ್ಪರ್ಧಿಸಬಹುದೇ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸುತ್ತಿದ್ದಾಗ, ಮಧ್ಯಪ್ರವೇಶಿಸಿದ ಜಮೀರ್ ಅಹ್ಮದ್ ಖಾನ್, ಅವರು ಸ್ಪರ್ಧಿಸಬೇಕು ಎಂಬುದು ನನ್ನ ಆಸೆ ಎಂದು ಹೇಳಿದರು. ಚಾಮರಾಜಪೇಟೆ ಕ್ಷೇತ್ರವು ಅಲ್ಪಸಂಖ್ಯಾತ ಸಮುದಾಯದ ಮತಗಳು ಅಧಿಕ ಸಂಖ್ಯೆಯಲ್ಲಿದೆ.

ಮೇ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸೋಲಿನ ರುಚಿ ಕಂಡಿದ್ದ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ.

ಅಂದಿನ  ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿ (ಎಸ್) ನ ಜಿ ಟಿ ದೇವೇಗೌಡರ ವಿರುದ್ಧ 36,042 ಮತಗಳ ಅಂತರದಿಂದ ಸೋತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com