ಹಾನಗಲ್-ಸಿಂದಗಿ ಉಪ ಚುನಾವಣೆ: ನಾಳೆ ಫಲಿತಾಂಶ ಪ್ರಕಟ 

ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನಾಳೆ(ನ.2)ಹೊರಬೀಳಲಿದೆ.
ಸಿಂದಗಿ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗುಳಿ ತಮ್ಮ ಪತ್ನಿ ಜೊತೆಗೆ ಮತದಾನ ಮಾಡಿದ್ದ ಸಂದರ್ಭ
ಸಿಂದಗಿ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗುಳಿ ತಮ್ಮ ಪತ್ನಿ ಜೊತೆಗೆ ಮತದಾನ ಮಾಡಿದ್ದ ಸಂದರ್ಭ

ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನಾಳೆ(ನ.2)ಹೊರಬೀಳಲಿದೆ.

ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು ಮಧ್ಯಾಹ್ನದ ಹೊತ್ತಿಗೆ ಎರಡೂ ಕ್ಷೇತ್ರಗಳ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳಲಿದೆ. 

ಸಿಂದಗಿ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು ಹಾನಗಲ್ ಕ್ಷೇತ್ರದ ಮತ ಎಣಿಕೆ ಕಾರ್ಯ ಹಾವೇರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. 

ಮೊನ್ನೆ 30ರಂದು ಆ ಎರಡು ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಸಿಂದಗಿ ಕ್ಷೇತ್ರದಲ್ಲಿ ಶೇಕಡಾ 69.41ರಷ್ಟು ಮತ್ತು ಹಾನಗಲ್ ನಲ್ಲಿ ಶೇಕಡಾ 83.72ರಷ್ಟು ಮತದಾನವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com